ನಾಳೆಯಿಂದ ಬೆಳಗಾವಿಯಲ್ಲಿಅಧಿವೇಶನ

ಆದ್ಯೋತ್ ಸುದ್ದಿನಿಧಿ:
ಮೂರು ವರ್ಷದ ನಂತರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಸೋಮವಾರದಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ.

ಸರಕಾರ ಮತಾಂತರ ನಿಷೇಧ ಸಂಬಂಧಿಸಿದ ವಿಧೇಯಕ ಮಂಡಿಸಲು ಸಿದ್ದತೆ ನಡೆಸಿದೆ.ವಿರೋಧ ಪಕ್ಷದವರು ಇದನ್ನು ಬಲವಾಗಿ ವಿರೋಧಿಸುವ ಸಾಧ್ಯತೆ ಇದೆ.ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಹಾನಿಯಾಗಿದೆ.ರೈತರು ವಿರೋಧಿಸುವ ಕಾನೂನನ್ನು ಕೇಂದ್ರ ಸರಕಾರ ಹಿಂದಕ್ಕೆ ಪಡೆದಿದ್ದು ರಾಜ್ಯಸರಕಾರ ಇನ್ನೂ ತೀರ್ಮಾನ ಮಾಡಿಲ್ಲ.ರಸ್ತೆಗಳು ಓಡಾಡಲು ಸಾಧ್ಯವಾಗದಷ್ಟು ಹಾಳಾಗಿದೆ.ಗುತ್ತಿಗೆದಾರರು 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.ಇದಲ್ಲದೆ ಕೊವಿಡ್ ಹೆಚ್ಚಾಗುತ್ತಿದೆ,ಹೊಸರೋಗ ಕಾಣಿಸುತ್ತಿದೆ ಈ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಧಿವೇಶನದಲ್ಲಿ ಅವಕಾಶವಿದೆ. ಆದರೆ ಮತಾಂತರ ನಿಷೇಧ ವಿಧೇಯಕವೇ ಅಧೀವೇಶನವನ್ನು ಆಪೋಷನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸುಗಮವಾಗಿ ಅಧಿವೇಶನ ನಡೆಸಲು ಎಲ್ಲರೂ ಸಹಕರಿಸಬೇಕು,ಶಾಸಕರು ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮನವಿ ಮಾಡಿದ್ದಾರೆ.

ಅವರು ರವಿವಾರ ಸುವರ್ಣವಿಧಾನಸೌಧಕ್ಕೆ ಭೇಟಿ ನೀಡಿ, ಕಲಾಪ ಸುಗಮವಾಗಿ ನಡೆಯುವಂತೆ ವಿಧಾನಸಭೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ-ಸೂಚನೆ ನೀಡಿದರು. ವಿಧಾನಸಭೆ ಸಭಾಂಗಣದಲ್ಲಿ ಪೂರ್ವ ತಯಾರಿಯನ್ನು ವೀಕ್ಷಿಸಿ, ಮಾನ್ಯ ಶಾಸಕರುಗಳ ವಸತಿ ಹಾಗೂ ಕಾನೂನು ಸುವ್ಯವಸ್ಥೆ ಕುರಿತಂತೆ, ಜಿಲ್ಲಾಧಿಕಾರಿಗಳು, ಪೋಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ನಂತರದಲ್ಲಿ ಅಧಿವೇಶನದ ಭದ್ರತೆಗಾಗಿ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿಗಳಿಗೆ ನಿರ್ಮಿಸಿದ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ವೀಕ್ಷಿಸಿದರು.

About the author

Adyot

Leave a Comment