ಆದ್ಯೋತ್ ಸುದ್ದಿನಿಧಿ:
ವಿಶ್ವಗುರು ಮಹಾತ್ಮ ಬಸವಣ್ಣವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿ ಅಧಿಕೃತ ಭಾವಚಿತ್ರವನ್ನು ಅನಾವರಣಗೊಳಿಸಿದ ರಾಜ್ಯ ಸರ್ಕಾರಕ್ಕೆ ವೀರಶೈವ ಲಿಂಗಾಯತ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಎಸ್ ಎಂ ಎಲ್ ಪ್ರವೀಣ್ ಅಭಿನಂದನೆ ಸಲ್ಲಿಸಿದ್ದಾರೆ
12ನೆಯ ಶತಮಾನದಲ್ಲಿ ವಚನದ ಮೂಲಕ ಸಮಾನತೆ ಸಾರಿ ಅನುಭವ ಮಂಟಪವನ್ನು ಸ್ಥಾಪಿಸುವುದರ ಮೂಲಕ ಸಂಸತ್ತಿನ ಕಲ್ಪನೆಯನ್ನು ಕೊಟ್ಟಂತ ಮಹಾನ್ ದಾರ್ಶನಿಕ ವಿಶ್ವಗುರು ಬಸವಣ್ಣನವರು.
ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ದೇಶದ ಅನೇಕ ಭಾಗಗಳಿಂದ ಬಂದ ಚಿಂತಕರು ವಚನಗಳ ಮೂಲಕ ಕ್ರಾಂತಿಯನ್ನು ಮಾಡಿದರು ಇಂದು ಅವರು ಮಾಡಿದ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರವು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿ ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಾಂಸ್ಕೃತಿಕ ನಾಯಕ ಎಂದು ಬರೆದು ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಆದೇಶ ಮಾಡಿರುವುದು ಇಡೀ ಸರ್ವ ಜನಾಂಗಕ್ಕೆ ಜನತೆಗೆ ಬಹಳ ಸಂತೋಷ ಉಂಟು ಮಾಡಿದೆ ರಾಜ್ಯ,ಜಿಲ್ಲೆ,ಹಾಗೂ ತಾಲೂಕ ಮಟ್ಟಗಳಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ಬಸವಣ್ಣನವರ ಚಿಂತನೆಗಳು ಹಾಗೂ ಸರಕಾರದ ಉದ್ದೇಶಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ದೇಶನ ಮಾಡಿರುವುದು ಕನ್ನಡ ನಾಡಿನ ಹಲವಾರು ಮಠಾಧೀಶರ ಬಸವಾಭಿಮಾನಿಗಳ ಹೋರಾಟದ ಫಲವಾಗಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಇದೇ ತಿಂಗಳು 16 ರಂದು ಸರ್ಕಾರದ ಬಜೆಟ್ ನಲ್ಲಿ ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯ ಅಭಿವೃದ್ಧಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿಯನ್ನು ರಚನೆ ಮಾಡಿ ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವುದರ ಮೂಲಕ ಬಸವಜನ್ಮಸ್ಥಳವನ್ನು ರಾಮ ಜನ್ಮ ಭೂಮಿ ಅಯೋದ್ಯೆ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕು ಅಂತರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು