ಹಾಲಿನ ದರ ಹೆಚ್ಚಳ ಶಿರಸಿಯಲ್ಲಿ ಬಿಜೆಪಿ ರೈತಮೋರ್ಚಾದಿಂದ ಪ್ರತಿಭಟನೆ

ಆದ್ಯೋತ್ ಸುದ್ದಿನಿಧಿ:
ರಾಜ್ಯಸರಕಾರ ನಂದಿನಿ ಹಾಲಿನ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾವತಿಯಿಂದ ಶಿರಸಿಯ ಸಹಾಯಕ ಆಯುಕ್ತರ ಕಚೇರಿ ಎದುರು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಮೇಶ ನಾಯ್ಕ ನೇತೃತ್ವದಲ್ಲಿ ಬಿಜೆಪಿಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮಾತನಾಡಿ,ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಸಿದ್ದರಾಮಯ್ಯ ಸರ್ಕಾರ ಗ್ರಾಹಕರನ್ನು ದೋಚುತ್ತಿದೆ. ದಿನಬೆಳಗಾದರೆ ಈ ಲೂಟಿಕೋರ ಸರ್ಕಾರ ಯಾವ ಬೆಲೆ ಹೆಚ್ಚಳ ಮಾಡುತ್ತದೆ ಎಂದು ನೋಡುವಂತಾಗಿದೆ. ಗ್ಯಾರಂಟಿಗೆ ಹಣ ಹೊಂದಿಸಲು ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಮುಂದುವರೆದು ಒಂದು ಕಪ್ ಟೀ ಕುಡಿಯುವುದರ ಮೇಲೆ ಕೂಡ ಬೆಲೆ ಏರಿಕೆಯ ಬರೆ ಎಳೆದಿದ್ದಾರೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳ ಹೀಗೆ ಬೆಲೆ ಏರಿಕೆಯನ್ನೇ ಸರ್ಕಾರದ ಕೆಲಸ ಎಂದು ಕಾಂಗ್ರೆಸ್ ಸರ್ಕಾರ ಭಾವಿಸಿದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಮೇಶ ನಾಯ್ಕ ಮಾತನಾಡಿ,ಹಾಲಿನ ಪ್ರೋತ್ಸಾಹ ಧನ ನೀಡಲೂ ರಾಜ್ಯ ಸರ್ಕಾರ ವಿಫಲವಾಗಿದೆ.ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡದೆ ಅಮಾನವೀಯವಾಗಿ ಸರ್ಕಾರ ನಡೆದುಕೊಂಡಿದೆ. ಬಿತ್ತನೆ ಬೀಜ, ಪಶು ಆಹಾರದ ದರ ಹೆಚ್ಚಳ ಮಾಡಿದೆ. ರೈತ ವಿದ್ಯಾನಿಧಿ ಹಾಗೂ ರೈತ ಶಕ್ತಿ ಯೋಜನೆಗಳನ್ನು ಈ ಸರ್ಕಾರ ನಿಲ್ಲಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.

About the author

Adyot

Leave a Comment