ಆದ್ಯೋತ್ ಸುದ್ದಿನಿಧಿ:
ರಾಜ್ಯ ಆಯವ್ಯಯ (ಬಜೆಟ್) ಮಂಡನೆಯಲ್ಲಿ ಅನುದಾನ ರಹಿತ ಶಾಲೆ,ಕಾಲೇಜುಗಳನ್ನು ಅನುದಾನಕ್ಕೊಳಪಡಿಸುವ ಜತೆಗೆ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಶಿಕ್ಷಕರ ಉಪನ್ಯಾಸಕರ ಕ್ರೀಯಾ ಸಮಿತಿ ಅಧ್ಯಕ್ಷ, ಅಖಿಲ ಭಾರತ ಶಿಕ್ಷಕರ ಪೇಡರೇಷನ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಮುಖ್ಯಮಂತ್ರಿ ಬವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ.
ಗುರುವಾರ ಪ್ರಕಟಣೆ ಮೂಲಕ ಮನವಿ ಮಾಡಿರುವ ಅವರು, ರಾಜ್ಯದ ಶಿಕ್ಷಕರ ಉಪನ್ಯಾಸಕರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಪ್ರತ್ಯೇಕ ವೇತನ ಆಯೋಗ ರಚಿಸಬೇಕು. ರಾಜಸ್ತಾನ ಸರಕಾರ ರಾಜ್ಯ ಬಜೆಟ್ ಮಂಡನೆಯ ಸಂದರ್ಭದಲ್ಲಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಅಧಿಕೃತವಾಗಿ ಘೋಷಿಸಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಸಹ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
೧೯೯೫ರ ನಂತರ ಪ್ರಾರಂಭವಾದ ಅನುದಾನ ರಹಿತ ಎಲ್ಲ ಶಾಲೆ, ಕಾಲೇಜು, ವೃತ್ತಿ ತರಬೇತಿ ಸಂಸ್ಥೆಗಳನ್ನು ತಕ್ಷಣ ಅನುದಾನಕ್ಕೊಳಪಡಿಸಬೇಕು ಅಥವಾ ಬಜೆಟ್ನಲ್ಲಿ ಘೋಷಿಸಿ ಅನುದಾನ ರಹಿತ ಶಾಲೆ,ಕಾಲೇಜ ಶಿಕ್ಷಕರು ನೆಮ್ಮದಿಯಿಂದ ಜೀವನ ನಿರ್ವಹಣೆಗಾಗಿ ಅವಕಾಶ ಕಲ್ಪಿಸಬೇಕು.ಅನುದಾನಿತ ಅನುದಾನ ರಹಿತ ಶಾಲೆ, ಕಾಲೇಜು, ವೃತ್ತಿ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಪಿಂಚಣಿ ಸೌಲಭ್ಯ, ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು.
ಕಾಲ್ಪನಿಕ ವೇತ ಬಡ್ತಿ ಸಮಸ್ಯೆ ಇನ್ನು ಬಗೆಹರಿಯದೆ ಇರುವದರಿಂದ ನಿವೃತ್ತಿಯಾಗುವ ಶಿಕ್ಷಕರುಗಳಿಗೆ ತೊಂದರೆಯಾಗಿದೆ.ತಕ್ಷಣ ಈ ಸಮಸ್ಯೆ ಬಗೆಹರಿಸಬೇಕು. ಸರಕಾರಿ ಶಿಕ್ಷಕರುಗಳಿಗೆ ದೊರೆಯವ ಎಲ್ಲ ಸೌಲಭ್ಯಗಳನ್ನು ಖಾಸಗಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರುಗಳಿಗೆ ಯಥಾಸ್ಥಿತಿ ಮಂಜೂರ ಮಾಡಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸಿ ಶಿಕ್ಷಕರ ನೆಮ್ಮದಿ ಜೀವನಕ್ಕೆ ಅನುವು ಮಾಡಿಕೊಡಬೇಕು ಎಂದು ಗುರಿಕಾರ, ಮುಖ್ಯಮಂತ್ರಿ ಬೊಮ್ಮಾಯಿಯವರಲ್ಲಿ ಮನವಿ ಮಾಡಿದ್ದಾರೆ.
—