ಅಕ್ರಮವಾಗಿ ಜಿಂಕೆ ಸಾಕಿದ್ದ ವ್ಯಕ್ತಿಯ ಬಂಧನ

ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲಕೊಪ್ಪದಲ್ಲಿ ಅಕ್ರಮವಾಗಿ ಜಿಂಕೆಯನ್ನು ಬಂಧನದಲ್ಲಿಟ್ಟಿದ್ದ ವ್ಯಕ್ತಿಯನ್ನು ದಾಂಡೇಲಿ ಸಂಚಾರಿ ಅರಣ್ಯ ಪೊಲೀಸ್ ದಳದವರು ಬಂಧಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿನಡೆಸಿದ ಪೊಲೀಸ್ ದಳ ಹಬೀಬ್ ರೆಹಮಾನ್ ಮಹಮ್ಮದ ಸಾಬ್ ಎನ್ನುವ ವ್ಯಕ್ತಿಯನ್ನು
ಬಂಧಿಸಿ ಜಿಂಕೆಯನ್ನು ಶಿರಸಿ ಅರಣ್ಯ ಇಲಾಖೆಯ ಸುಪರ್ದಿಗೆ ನೀಡಲಾಗಿದೆ.

ಕಳೆದ ಆರು ತಿಂಗಳಿನಿಂದ ಆರೋಪಿ ಈ ಜಿಂಕೆಯನ್ನು ತನ್ನ ಮನೆಯಲ್ಲೇ ಅಕ್ರಮವಾಗಿ ಬಂದಿಸಿಟ್ಟಿದ್ದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದ್ದು ನ್ಯಾಯಾಲಯ ಆರೋಪಿಗೆ 15 ದಿನಗಳ ನ್ಯಾಯಾಂಗಬಂಧನ ವಿಧಿಸಲಾಗಿದೆ.

ದಾಂಡೇಲಿ ಸಿ.ಐ.ಡಿ ಅರಣ್ಯ ಘಟಕದ ಪಿ.ಎಸ್.ಐ. ಮಂಜುನಾಥ ಬೋರಕರ ಹಾಗು ಸಿಬ್ಬಂದಿಗಳು ಈ ಕಾರ್ಯಾಚರಣೆಯನ್ನು ನಡೆಸಿದ್ದು ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

About the author

Adyot

Leave a Comment