ಆದ್ಯೋತ್ ಸುದ್ದಿನಿಧಿ:
ಸಂಸದೀಯ ಮೌಲ್ಯಗಳ ಕುಸಿತ ತಡೆಯುವ ನಿಟ್ಟಿನಲ್ಲಿ “ಆತ್ಮಾವಲೋಕನ ಕಾರ್ಯಕ್ರಮ”ದ ಮುಂದುವರೆದ ಭಾಗವಾಗಿ
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಬೆಂಗಳೂರಿನಲ್ಲಿ ವಿವಿಧ ರಾಜಕೀಯ ಪಕ್ಷಗಳ ಮಖಂಡರುಗಳ ಸಭೆ ನಡೆಸಿ ಚರ್ಚಿಸಿದರು.
ಅಧಿವೇಶನಕ್ಕೆ ಹಾಜರಾಗುವ ಮುನ್ನ ಸದಸ್ಯರಲ್ಲಿ ಶಿಸ್ತು, ಉತ್ತಮ ನಡವಳಿಕೆ ಹಾಗೂ ಘನತೆಯನ್ನು ಬೆಳೆಸುವುದು ಆಯಾ ರಾಜಕೀಯ ಪಕ್ಷಗಳ ಕರ್ತವ್ಯ ಮತ್ತು ಜವಾಬ್ದಾರಿಯಾಗಿದ್ದು, ಗದ್ದಲ ನಡೆಸುವ ಸದಸ್ಯರನ್ನು ಉಳಿದ ಅಧಿವೇಶನಕ್ಕೆ ಬಹಿಷ್ಕರಿಸಬೇಕು. ಶಾಸಕಾಂಗದ ಘನತೆಗೆ ಕುಂದು ತರುವಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಕಾರ್ಯವಿಧಾನದ ನಡವಳಿಗೆ ಸೂಕ್ತ ತಿದ್ದುಪಡಿ ತರಬೇಕೆಂದು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು ಹಾಗೂ ಸಭೆಯಲ್ಲಿ ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಯಿತು.
ಆತ್ಮಾವಲೋಕನ ಸಭೆಯಲ್ಲಿ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡಿ ಎಚ್ ಶಂಕರಮೂರ್ತಿ, ವಿ ಆರ್ ಸುದರ್ಶನ್, ಕೆ ಜಿ ಬೋಪಯ್ಯ, ಮಾಜಿ ಸಚಿವ ಪಿ.ಜಿ ಆರ್.ಸಿಂಧಿಯಾ ಮತ್ತು ಎಸ್. ಸುರೇಶ್ ಕುಮಾರ್, ಶಾಸಕ ಎ ಟಿ ರಾಮಸ್ವಾಮಿ ಮತ್ತು ಹೆಚ್ ಕೆ ಕುಮಾರಸ್ವಾಮಿ ಭಾಗವಹಿಸಿದ್ದರು.
—–
ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಬೆಂಗಳೂರಿನಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
—-
ವಿಶ್ವೇಶ್ವರ ಹೆಗಡೆ ಕಾಗೇರಿಯವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಛೇರಿಗೆ ಸೌಹಾರ್ದಯುತವಾಗಿ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಷಡಕ್ಷರಿ ಹಾಗೂ ಸಂಘದ ಪದಾಧಿಕಾರಿಗಳು ಸನ್ಮಾನ್ಯ ಸಭಾಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.