ಆದ್ಯೋತ್ ಸುದ್ದಿನಿಧಿ
ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಭೀಮಣ್ಣ ನಾಯ್ಕ ಒಡೆತನದ ಸುಪ್ರಿಯ ಇಂಟರ್ ನ್ಯಾಷನಲ್ ಹೊಟೆಲ್ ಉದ್ಘಾಟನೆ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರಿಕೆಯವರೊಂದಿಗೆ ಮಾತನಾಡಿ,ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮುಖ್ಯಮಂತ್ರಿಯಾಗುವ ಅವಕಾಶವಿದೆ.ದಲಿತ ಮುಖ್ಯಮಂತ್ರಿಯನ್ನು ಬಲತ್ಕಾರವಾಗಿ ಹೇರಲು ಸಾಧ್ಯವಿಲ್ಲ.ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯನ್ನು ಹೈಕಮಾಂಡ ಆಯ್ಕೆ ಮಾಡುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಧಾರ್ಮಿಕ ನೆಪ ಮುಂದಿಟ್ಟುಕೊಂಡು ಕಾನೂನು ಸುವ್ಯವಸ್ಥೆ ಹಾಳುಮಾಡಲಾಗುತ್ತಿದೆ.ಹೀಗಾದರೆ ರಾಜ್ಯದಲ್ಲಿ ಬಂಡವಾಳ ಹೂಡಲು ಯಾರು ಮುಂದೆಬರುತ್ತಾರೆ. ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ಮಕ್ಕಳ ಮನಸ್ಸಿನಲ್ಲಿ ಸಾಮರಸ್ಯ ಕದಡುವ ಕೆಲಸ ಮಾಡಲಾಗುತ್ತಿದೆ.ಮನುಷ್ಯರಾಗಿ ಬದುಕುತ್ತಿರುವ ಜನರ ಮಧ್ಯದಲ್ಲಿ ಹುಳಿಹಿಂಡುವ ಕೆಲಸ ಮಾಡುವ ಮುತಾಲಿಕ್ ನಂತಹವರನ್ನು ಹಿಡಿದು ಒಳಗೆ ಹಾಕಬೇಕು.ನಾನು ರಾಷ್ಟ್ರರಾಜಕಾರಣಕ್ಕೆ ಹೋಗುವುದಿಲ್ಲ ರಾಜ್ಯರಾಜಕಾರಣದಲ್ಲಿ ಸಕ್ರೀಯವಾಗಿದ್ದು ಮುಂದೆಯೂ ಜನರ ಸಮಸ್ಯೆಗೆ ಸ್ಪಂದಿಸುತ್ತೆನೆ ಎಂದು ಹೇಳಿದರು.
ಬರುವ ವಿಧಾನ ಸಭಾ ಚುನಾವಣೆಯಲ್ಲಿ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆಗೆ ಯಾವುದೇ ರೀತಿಯ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಆ ಪಕ್ಷದ ಜೊತೆಯಲ್ಲಿ ಚುನಾವಣೆ ಸಂಬಂಧವಾಗಲಿ,ಬೇರೆ ಸಂಬಂಧವಾಗಲಿ ಇಲ್ಲ ಚುನಾವಣೆಯಲ್ಲಿ ಯುವಕರಿಗೆ ಶೇ.50ರಷ್ಟು ಸೀಟ್ ನೀಡಲಾಗುವುದು.ಉಳಿದಂತೆ ಅನುಭವಿಗಳಿಗೆ,ಹಿರಿಯರಿಗೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಇದಕ್ಕೂ ಮೊದಲು ನಡೆದ ಸುಪ್ರಿಯಾ ಇಂಟರ್ ನ್ಯಾಷನಲ್ ಹೊಟೆಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ,ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶವಿದೆ.ಉದ್ಯಮಬೆಳೆದರೆ ಆರ್ಥಿಕತೆ ಬೆಳೆಯುತ್ತದೆ.ಭೀಮಣ್ಣ ನಾಯ್ಕ ಮೂಲತ: ಕೃಷಿಕರು ಈಗ ಉದ್ಯಮಿಯಾಗಿ ಬೆಳೆಯುತ್ತಿದ್ದಾರೆ ಎಂದು ಹೇಳಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ,ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕಾದರೆ ಸರಕಾರದ ಜೊತೆಗೆ ಖಾಸಗಿ ಸಹಭಾಗಿತ್ವ ಅವಶ್ಯಕ.ಯುವಕರು ಪಟ್ಟಣವನ್ನು ಸೇರದೆ ಇಲ್ಲಿಯೇ ಉದ್ಯಮವನ್ನು ಬೆಳೆಸುವ ಪ್ರಯತ್ನ ಮಾಡಬೇಕು,ಶಿರಸಿಯಂತಹ ಅಭಿವೃದ್ಧಿ ಹೊಂದುತ್ತಿರುವ ಪಟ್ಟಣಕ್ಕೆ ಎಲ್ಲಾ ಅನುಕೂಲ ಇರುವ ಇಂತಹ ಹೊಟೆಲ್ ಅವಶ್ಯಕತೆ ಇದೆ ಎಂದು ಹೇಳಿದರು
ಇದೇ ಸಂದರ್ಭದಲ್ಲಿ ಜಿಲ್ಲೆಯ 10 ನೇ ತರಗತಿಯಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಗಳಿಸಿದ 7 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗೂ ಫ್ರಾನ್ಸ್ನಲ್ಲಿ ನಡೆದ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಸ್ವರ್ಣ ಪದಕ ಗೆದ್ದ ಪ್ರೇರಣಾ ಶೇಟರವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಗೋಡು ತಿಮ್ಮಪ್ಪ, ಆರ್ ವಿ ದೇಶಪಾಂಡೆ, ಮಧುಬಂಗಾರಪ್ಪ,ಡಾ. ಶಿವರಾಜ್ ಕುಮಾರ
ಆಗಮಿಸಿದ್ದರು.