ಆದ್ಯೋತ್ ಸುದ್ದಿನಿಧಿ:
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ (ಬಿಎಂಎಸ್) ಸಂಘ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಗುರುವಾರ
ಬೆಂಗಳೂರು ಚಲೋ ಹಮ್ಮಿಕೊಂಡಿದ್ದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಎಂಎಸ್ ಸಂಘದ ಅಧ್ಯಕ್ಷ ವಿಶ್ವಾರಾಧ್ಯ ಹೆಚ್.ಎ. ತಿಳಿಸಿದ್ದಾರೆ.
ಸಂಘದ ಗೌರವಾಧ್ಯಕ್ಷ ಅಯನೂರು ಮಂಜುನಾಥ ಸಾಕಷ್ಟು ಬಾರಿ ಆರೋಗ್ಯ ಮಂತ್ರಿ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ
ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ಸಮಿತಿ ರಚಿಸಿ ವರ್ಷ ಕಳೆದರೂ ಅದನ್ನು ಅನುಷ್ಠಾನಗೊಳಿಸಿಲ್ಲ.ಸಮಾನ ಕೆಲಸಕ್ಕೆ ಸಮಾನ ವೇತನ,ಸೇವಾಭದ್ರತೆ,ವಯೋಮಿತು ಸಡಿಲಿಕೆ ಹೆಚ್ಚಳ,ಕೃಪಾಂಕ ಹೆಚ್ಚಳ,ವರ್ಗಾವಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ.ಇದರಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಅದಕ್ಕೆ ಸರಕಾರವೇ ನೇರವಾಗಿ ಹೊಣೆಯಾಗುತ್ತದೆ ಎಂದು ವಿಶ್ವಾರಾಧ್ಯ ಹೇಳಿದ್ದಾರೆ.