ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಲು ಎಸ್ ಎಂ ಎಲ್. ಪ್ರವೀಣ ಆಗ್ರಹ

ಆದ್ಯೊತ್ ಸುದ್ದಿನಿಧಿ
ಅಖಿಲ ಭಾರತ ವೀರಶೈವ ಲಿಂಗಾಯತ್ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ನಿರ್ದೇಶಕ
ಎಸ್ಎಂಎಲ್ ಪ್ರವೀಣ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.


ಈ ಕುರಿತು ಹೇಳಿಕೆ ನೀಡಿರುವ ಅವರು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವರಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿರುತ್ತಾರೆ . ಈಶ್ವರ ಖಂಡ್ರೆ ಅವರನ್ನ ಕೆಪಿಸಿಸಿಗೆ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವದರಿಂದ ಸಮಸ್ತ ವೀರಶೈವ ಸಮುದಾಯಕ್ಕೆ ಸಂತಸವಾಗುತ್ತದೆ ಅಲ್ಲದೆ ಅವರಿಗೆ ಉಪಮುಖ್ಯಮಂತ್ರಿ ಮಾಡುವುದರಿಂದ ರಾಜ್ಯದ ವೀರಶೈವ ಸಮುದಾಯಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ. ವೀರಶೈವ ಸಮುದಾಯವನ್ನು ಅಷ್ಟೇ ಅಲ್ಲದೆ ಎಲ್ಲಾ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದೆ ಸಾಗುವ ಅಪಾರ ಅನುಭವಿ ಆಗಿರುವ ಈಶ್ವರ್ ಖಂಡ್ರವರಿಗೆ ಸಾಮರ್ಥ್ಯ ಇದೆ ಎಂದು ಪ್ರವೀಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About the author

Adyot

Leave a Comment