ಆದ್ಯೋತ್ ಸುದಿನಿಧಿ:
ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ
ಧರ್ಮಭಾರತೀ, ಶ್ರೀಸಂಸ್ಥಾ ಪತ್ರಿಕೆಗಳಲ್ಲಿ ಶ್ರೀರಾಘವೇಶ್ವರ ಸ್ವಾಮೀಜಿಯವರು ಬರೆದ ಭಾವರಾಮಾಯಣವನ್ನು ಲೋಕಾರ್ಪಣಾ ಕಾರ್ಯಕ್ರಮ ನಡೆಯಿತು.

_autotone
ರಾಮಾಯಣವನ್ನು ಓದುವಾಗಲೇ ಶಬ್ದಗಳಲ್ಲಿ ಹೇಳಲಾರದ ಸುಖದ ಅನುಭವವಾಗುತ್ತದೆ. ರಾಮಾಯಣವು ತೋರಿದ ಹಾದಿಯಲ್ಲಿ ನಡೆದಾಗ ಜೀವನದಲ್ಲಿ ಅನ್ಯಾನ್ಯ ಸುಖಗಳು ಒದಗಿ ಬರುತ್ತವೆ. ರಾಮಾಯಣದ ಅವಲೋಕನವು ಪುಣ್ಯವನ್ನು ತಂದುಕೊಡುತ್ತದೆ. ಹೀಗೆ ರಾಮಾಯಣದ ಅನುಸಂಧಾನದಿಂದ ಮುಬ್ಬಗೆಯ ಸುಖಗಳ ಪ್ರಾಪ್ತಿಯಾಗುತ್ತದೆ.ರಾಮಾಯಣದ ಓದಿನಿಂದ ಜೀವಿಯು ಬಯಸುವ ಧರ್ಮ, ಅರ್ಥ, ಕಾಮ, ಮೋಕ್ಷಗಳೆಂಬ ಪುರುಷಾರ್ಥಗಳು ಲಭಿಸುತ್ತವೆ. ನಾಲ್ಕು ಪುರುಷಾರ್ಥಗಳನ್ನು ಹೊರತುಪಡಿಸಿ ಜೀವಿ ಏನನ್ನೂ ಬಯಸುವುದಿಲ್ಲ. ಏನನ್ನೇ ಬಯಸಿದರೂ ಅದು ಪುರುಷಾರ್ಥಗಳಲ್ಲೇ ಬರುತ್ತದೆ. ಹಾಗಾಗಿ ಪುರುಷಾರ್ಥವನ್ನು ಕೊಡುವುದರ ಮೂಲಕ ರಾಮಾಯಣ ಎಲ್ಲವನ್ನೂ ಕೊಟ್ಟಂತಾಯಿತು ಎಂದು ಹೇಳಿದರು.

_oldphoto
ಧರ್ಮಭಾರತೀ ಸಂಪಾದಕ ಕೃಷ್ಣಾನಂದ ಶರ್ಮಾ ಪ್ರಸ್ತಾವಿಕವಾಗಿ ಮಾತನಾಡಿ, ಶ್ರೀಗಳು ಸಂನ್ಯಾಸ ಸ್ವೀಕರಿಸಿ ಮೂವತ್ತು ವರ್ಷ ಸಂದಲಿದೆ. ಈ ಹೊತ್ತಿನಲ್ಲಿ ಶ್ರೀಮಠದ ಅಂಗಸಂಸ್ಥೆ ಶ್ರೀಭಾರತೀಪ್ರಕಾಶನ ಪ್ರಕಟಿಸುವ ಧರ್ಮಭಾರತೀ ಪತ್ರಿಕೆಯಲ್ಲಿ ಪ್ರತಿತಿಂಗಳು ಶ್ರೀಗಳೇ ಪೂರ್ಣ ರಾಮಾಯಣವನ್ನು ಬರೆಯಲಿದ್ದಾರೆ. ಅದನ್ನು ಮೂವತ್ತು ಸಾವಿರಕ್ಕೂ ಹೆಚ್ಚು ಮನೆಗಳಿಗೆ ತಲುಪಿಸಲಾಗುತ್ತಿದೆ. ಈ ರಾಮಾಯಣ ಲೇಖನ ಪೂರ್ಣಗೊಂಡಾಗ ಪೂರ್ಣರಾಮಾಯಣ ಅಷ್ಟು ಮನೆಗಳಲ್ಲಿ ಶಾಶ್ವತವಾಗಿ ಇರಲಿದೆ ರಾಮಚಂದ್ರಾಪುರಮಠ ಮಾಡಿದ ಅನೇಕ ಶಾಶ್ವತ ಕಾರ್ಯಗಳಲ್ಲಿ ಇದೂ ಒಂದಾಗಲಿದೆ. ಧರ್ಮಭಾರತಿಯ ಜೊತೆ ಶ್ರೀಸಂಸ್ಥಾ ಎನ್ನುವ ಶ್ರೀಮಠದ ವಾರ್ತಾ ಪತ್ರಿಕೆಯನ್ನು ಕೂಡ ಪ್ರತಿ ತಿಂಗಳು ಪ್ರಕಟಿಸಲಾಗುತ್ತದೆ. ಇದು ಪ್ರತಿದಿನ ನಡೆಯುತ್ತಿರುವ ಶ್ರೀಮಠದ ಲೋಕಕಲ್ಯಾಣಕಾರ್ಯಗಳ ಸಮಗ್ರ ಮಾಹಿತಿಯನ್ನು ಎಲ್ಲರಿಗೂ ಲಭ್ಯವಾಗಿಸಲಿದೆ ಎಂದರು.

_autotone
ವಿಶ್ವವಿದ್ಯಾಪೀಠದ ಲೋಕಸಂಪರ್ಕಾಧಿಕಾರಿ ಅಶ್ವಿನೀ ಉಡುಚೆ ಭಾವರಾಮಾಯಣದ ಮಹತ್ತ್ವವನ್ನು ವಿವರಿಸಿದರು. ಮಹಾಮಂಡಲದ ಅಧ್ಯಕ್ಷ ಆರ್, ಎಸ್ ಹೆಗಡೆ ಹರಗಿ, ಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ಶ್ರೀಭಾರತೀಪ್ರಕಾಶನದ ಅಧ್ಯಕ್ಷ ಸಚಿನ್, ಉಪಸಂಪಾದಕ ಗಣೇಶ ಕೃಷ್ಣ ಹೆಗಡೆ, ಪ್ರಸರಣ ಮಾರ್ಗದರ್ಶಕ ಮಹೇಶ ಚಟ್ನಳ್ಳಿ ಮತ್ತಿತರರು ಉಪಸ್ಥಿತರಿದ್ದರು.