ಹುಬ್ಬಳ್ಳಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಭೇಟಿಯಲ್ಲಿದ್ದು, ಸಂಜೆ ಹುಬ್ಬಳ್ಳಿಯಲ್ಲಿ ನಡೆಯಲಿರೋ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಒಂದು ದಿನದ ರಾಜ್ಯ ಪ್ರವಾಸದಲ್ಲಿ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರೋ ವೇದಾಂತ ಭಾರತಿ ವಿವೇಕ ಪ್ರದೀಪಿನಿಯ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಸಂಜೆ 5.20ಕ್ಕೆ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ನಡೆಯಲಿರೋ ಪೌರತ್ವ ತಿದ್ದುಪಡಿ ಕಾಯ್ದೆ ಪರ ಜನಜಾಗರಣ ಅಭಿಯಾನದ ಸಾರ್ವಜನಿಕ ಸಭೆಯನ್ನ ಉದ್ಘಾಟಿಸಿ ಮಾತನಾಡಲಿದ್ದಾರೆ.