ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಆಯ್ಕೆಯಾದ ಕನ್ನಡತಿ ಆರತಿ

ಹೊನ್ನಾವರ : ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ಕೊಡುವ ರಾಷ್ಟ್ರೀಯ ಶೌರ್ಯ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ 9 ವರ್ಷದ ಆರತಿ ಕಿರಣ್ ಶೇಟ್ ಆಯ್ಕೆಯಾಗಿದ್ದಾಳೆ.

ಜಿಲ್ಲೆಯ ಹೊನ್ನಾವರ ತಾಲೂಕಿನ ನವಿಲಗೋಣ ಗ್ರಾಮದ ಆರತಿ 2019ರಲ್ಲಿ 2 ವರ್ಷದ ಮಗುವನ್ನು ಹಸುವಿನ ದಾಳಿಯಿಂದ ರಕ್ಷಣೆ ಮಾಡಿದ್ದಳು. ಈಕೆಯ ಸಮಯೋಚಿತ ನಡೆಯಿಂದಾಗಿ ಮಗುವಿಗೆ ಪುನರ್ಜನ್ಮ ಸಿಕ್ಕಿತ್ತು. 5 ನೇ ತರಗತಿಯಲ್ಲಿ ಓದುತ್ತಿರುವ ಆರತಿ ಶೇಟ್ ಗೆ ಕಳೆದ ವರ್ಷ ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು. ಈಗ ನೀಡುವ ಪ್ರಶಸ್ತಿಯು ಪ್ರಶಸ್ತಿ ಪದಕ, 1 ಲಕ್ಷ ರೂಪಾಯಿ ನಗದು, 10 ಸಾವಿರ ರೂಪಾಯಿ ಮೌಲ್ಯದ ಬುಕ್ ವೋಚರ್ ಹಾಗೂ ಪ್ರಮಾಣ ಪತ್ರ ಹೊಂದಿರಲಿದೆ.
ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಘೋಷಿಸಿದ್ದು, ಜನವರಿ 26ರಂದು ರಾಜ​ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​ ನಂತರ ಪ್ರಶಸ್ತಿ ಪ್ರಧಾನ ನಡೆಯಲಿದೆ.

About the author

Adyot

Leave a Comment