ಭಾರತದ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ

ಮುಂಬೈ : ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಮುಂಬೈನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ, ಟೀಮ್ ಇಂಡಿಯಾ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ಬ್ಯಾಟ್ಸಮನ್ ಗಳ ವೈಫಲ್ಯದಿಂದ 49.1 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನ ಕಳೆದುಕೊಂಡು 255 ರನ್ ಗಳಿಸಿತು. 256 ರನ್ ಗಳ ಸಾಧಾರಣ ಗುರಿಯನ್ನ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಆರೋನ್ ಫಿಂಚ್ ರ ಭರ್ಜರಿ ಶತಕಗಳ ನೆರವಿನಿಂದ 37.4 ಓವರ್ ಗಳಲ್ಲೇ ಗೆಲುವಿನ ಗುರಿ ತಲುಪಿತು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯ ಶುಭಾರಂಭ ಮಾಡಿ 1-0 ಮುನ್ನಡೆ ಪಡೆದುಕೊಂಡಿತು.

About the author

Adyot

Leave a Comment