ಆದ್ಯೋತ್ ಸುದ್ದಿನಿಧಿ:
ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರಾದ ಬಸವನ ಗೌಡ ತುರವೀಹಾಳ್(ಮಸ್ಕಿ) ಹಾಗೂ ಶರಣು ಸಾಲಗಾರ(ಬಸವಕಲ್ಯಾಣ) ಇವರಿಗೆ ಮಂಗಳವಾರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಧಿಕಾರ ಗೌಪ್ಯತೆ ಬೋಧಿಸಿದರು.
ವಿಧಾನಸಭೆಯ ಸಮ್ಮೇಳಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಇಬ್ಬರು ಶಾಸಕರು ಸತ್ತ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಶಾಸಕ ಶರಣು ಸಾಲಗಾರು ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ, ಬೀದರ್ ಲೋಕಸಭಾ ಕ್ಷೇತ್ರದ ಸದಸ್ಯ ಭಗವಂತ ಖೂಬಾ ಹಾಗೂ ಕುಟುಂಬದ ಸದಸ್ಯರು ಸೇರಿದಂತೆ ಮತ್ತಿತರರು ಸಾಥ್ ನೀಡಿದರು.
ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರಣು ಸಾಲಗಾರು ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಪರಭಾವಗೊಳಿಸಿದ್ದರು. ನಾರಾಯಣರಾವ್ ನಿಧನರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು.
ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವೇಗೌಡ ತುರವಿಹಾಳ್ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದರು. ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿತ್ತು.