ಆದ್ಯೋತ್ ಸುದ್ದಿ ನಿಧಿ : ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಇರೋದು ದೃಢಪಟ್ಟಿದೆ. ಈ ಕುರಿತು ಸ್ವತಃ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರೋ ಬಿ.ಎಸ್.ವೈ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳಿಲ್ಲದಿದ್ದರೂ ಕೂಡ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗೃತೆ ವಹಿಸಿ ಅಂತ ಹೇಳಿದ್ದಾರೆ. ಇದು ಈಗ ಬಿ.ಎಸ್ ಯಡಿಯೂರಪ್ಪರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವವರಿಗೆ ತಲೆನೋವಾಗಿ ಪರಿಣಮಿಸಿದೆ.