ಆದ್ಯೋತ್ ನ್ಯೂಸ್ ಡೆಸ್ಕ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಡಿ.ಕೆ ಶಿವಕುಮಾರ್ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅಖಿಲ ಭಾರತ ಕಾಂಗ್ರೆಸ್ ಕಮಿಟಿಯ ಕಾರ್ಯದರ್ಶಿ ವೇಣುಗೋಪಾಲ್ ರಾವ್ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರನ್ನು ನೇಮಕ ಮಾಡಿದ್ದು, ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಮ್ ಅಹ್ಮದ್ ಅವರನ್ನ ನೇಮಕ ಮಾಡಿದೆ. ಅದೇ ರೀತಿ ಮುಖ್ಯ ಸಚೇತಕರನ್ನ ಕೂಡ ನೇಮಕ ಮಾಡಿದ್ದು, ಎಂ.ನಾರಾಯಣಸ್ವಾಮಿ ಹಾಗೂ ಅಜಯ್ ಸಿಂಗ್ ಅವರನ್ನ ನೇಮಕ ಮಾಡಿದೆ. ಸಿ.ಎಲ್.ಪಿ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆಯನ್ನು ತಿರಸ್ಕಾರ ಮಾಡಲಾಗಿದ್ದು ಅವರೇ ಈ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.