ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕೆಪಿಸಿಸಿ ಶಿರಸಿ-ಸಿದ್ದಾಪುರ ಕ್ಷೇತ್ರ ಉಸ್ತುವಾರಿ ಸುಷ್ಮಾ ರಾಜಗೋಪಾಲ ಸುದ್ದಿಗೋಷ್ಠಿ ನಡೆಸಿದರು.
ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಈಡಾದ ಜನರಿಗೆ ಆಹಾರ ಕಿಟ್ ವಿತರಿಸಲು ನಿರ್ಣಯಿಸಲಾಗಿದೆ. ಜು.೫ರಂದು ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ನೀಡಲಿದ್ದು, ಗ್ರಾಮ ಗ್ರಾಮಗಳಿಗೆ ತೆರಳಿ ಕಿಟ್ ವಿತರಿಸಲಾಗುವುದು
ದೀಪಕ ಹೊನ್ನಾವರ ಅಭಿಮಾನಿ ಬಳಗ ಹಾಗೂ ರಾಜಗೋಪಾಲ ರೆಡ್ಡಿ ಸಹಾಯ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು ಜುಲೈ-5 ರಿಂದ ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ 5 ಸಾವಿರ ಆಹಾರ ಕಿಟ್ ಗಳನ್ನು ವಿತರಿಸಲಾಗುವುದು.
ಕರೊನಾ, ಲಾಕ್‌ಡೌನ್ ಕಾರಣಕ್ಕೆ ಟೆಂಪೊ, ಆಟೊ, ಬೀದಿ ಬದಿ ವ್ಯಾಪಾರಿಗಳ ಬದುಕು ದುಸ್ತರವಾಗಿದೆ. ಶಿರಸಿ, ಸಿದ್ದಾಪುರ ಕ್ಷೇತ್ರದಲ್ಲಿ ಅಂಥ ಸಂಕಷ್ಟಕ್ಕೀಡಾದ ಜನರನ್ನು ಗುರುತಿಸಿ ಅಂದಾಜು ೧ ಸಾವಿರ ರೂಪಾಯಿ ಮೌಲ್ಯದ
೫ ಸಾವಿರ ಕಿಟ್ ವಿತರಿಸಲಾಗುವುದು ಎಂದರು.
ಈ ವೇಳೆ ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ, ದೀಪಕ ಹೊನ್ನಾವರ ಅಭಿಮಾನಿ ಬಳಗದ ಸೂರ್ಯಪ್ರಕಾಶ ಹೊನ್ನಾವರ ಮುಂತಾದವರು ಉಪಸ್ಥಿತರಿದ್ದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ.ಹೈಕಮಾಂಡ ಕೂಡ ನನ್ನನ್ನು ಗುರುತಿಸುವ ವಿಶ್ವಾಸವಿದೆ.೨೦೧೦ರಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದೇನೆ
ಆಗಿಂದಲೂ ಪಕ್ಷಕ್ಕಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಸಹೋದರ ದೀಪಕ ಹೊನ್ನಾವರ ಅವರು ಎದುರಿಸಿದ್ದ ಚುನಾವಣೆ ಸಂದರ್ಭದಲ್ಲಿ ತಳಮಟ್ಟದಿಂದ ಕೆಲಸ ಮಾಡಿದ್ದೇನೆ. ನಂತರದಲ್ಲಿ ಸಾಮಾಜಿಕ ಜೀವನದಲ್ಲಿ ತೊಡಗಿಕೊಂಡು ಪಕ್ಷ ಸಂಘಟಿಸುವ ಕಾರ್ಯ ಮಾಡಿದ್ದೇನೆ ಪಕ್ಷ ನನ್ನ ಸೇವೆಯನ್ನು ಗುರುತಿಸಲಿದೆ ಎಂದು ಸುಷ್ಮಾ ರಾಜಗೋಪಾಲ ಸುದ್ದಿಗೋಷ್ಠಿಯಲ್ಲಿ ಹೇಳಿದರು.