ಹುಬ್ಬಳ್ಳಿ : ಇಂದು ಪಲ್ಸ್ ಪೋಲಿಯೋ ದಿನ. ರಾಜ್ಯದೆಲ್ಲೆಡೆ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.
ಅದೇ ರೀತಿ ಕರ್ನಾಟಕ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಯಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ ನೀಡಿದರು. ನಿನ್ನೆ ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ್ ಶಾ ರಾತ್ರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಮನೆಯಲ್ಲಿ ವಾಸ್ತವ್ಯ ಮಾಡಿದ್ದರು. ಇಂದು ಮುಂಜಾನೆ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದೆಹಲಿಗೆ ತೆರಳಿದರು.