ಆದ್ಯೋತ್ ಸುದ್ದಿ ನಿಧಿ : ಸೊರಬ ಪಟ್ಟಣ ಪಂಚಾಯಿತಿ ಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.
ಸಚಿವ ಸಂಪುಟ ಸಭೆಯಲ್ಲಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದ್ದು, ಇದರಲ್ಲಿ ಸೊರಬ ಪಟ್ಟಣ ಪಂಚಾಯಿತಿ ಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಹಾಗೂ ವಿಶ್ವವಿಖ್ಯಾತ ಜೋಗ್ ಫಾಲ್ಸ್ ನ ಅಭಿವೃದ್ಧಿಗಾಗಿ ಜೋಗ ಅಭಿವೃದ್ಧಿ ಪ್ರಾಧಿಕಾರಕ್ಕೆ 120 ಕೋಟಿ ರೂಪಾಯಿಗಳನ್ನು ನೀಡಲು ಅಂತಿಮವಾಗಿ ಸಭೆ ತೀರ್ಮಾನಿಸಿತು. ಸೊರಬದ ವಿಷಯವಾಗಿ ಶಾಸಕ ಕುಮಾರ್ ಬಂಗಾರಪ್ಪ ಹಾಗೂ ಜೋಗದ ಅಭಿವೃದ್ಧಿಗೆ ಹಣ ನೀಡಬೇಕೆಂಬ ಮನವಿಯನ್ನು ಸಾಗರ ಶಾಸಕ ಹರತಾಳು ಹಾಲಪ್ಪ ಸರ್ಕಾರದ ಮುಂದೆ ಇಟ್ಟಿದ್ದರು. ಈಗ ಇವರ ಮನವಿಗೆ ಸ್ಪಂದನೆ ದೊರೆತಿದೆ.
🙌🙏