ಇಂದೋರ್ : ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ 2 ನೇ ಟಿ-20 ಪಂದ್ಯದಲ್ಲಿ ಟಿಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಶ್ರೀಲಂಕಾ ನೀಡಿದ 142 ರನ್ ಬೆನ್ನತ್ತಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ 17.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ವಿಜಯದ ನಗೆ ಬೀರಿತು. ಕೆ.ಎಲ್ ರಾಹುಲ್ 45 ಹಾಗೂ ಶ್ರೇಯಸ್ ಅಯ್ಯರ್ 34 ರನ್ ಕಾಣಿಕೆ ನೀಡಿದ್ದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಇದಕ್ಕೂ ಮೊದಲು ಬ್ಯಾಟಿಂಗ್ ನಡೆಸಿದ್ದ ಶ್ರೀಲಂಕಾ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 142 ರನ್ ಗಳಿಸಿತ್ತು. ಭಾರತದ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದು ಮಿಂಚಿದ್ರು. 18 ರನ್ ನೀಡಿ 2 ವಿಕೆಟ್ ಪಡೆದ ನವದೀಪ್ ಸೈನಿ ಪಂದ್ಯಶ್ರೇಷ್ಠ ಪ್ರಶಸ್ತಿ ತನ್ನದಾಗಿಸಿಕೊಂಡರು. 3 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ.