ಗುಜರಾತ್ : ರಾಜಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 2ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 36 ರನ್ ಗಳ ಅಂತರದ ಜಯ ಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ಶಿಖರ್ ಧವನ್, ನಾಯಕ ವಿರಾಟ್ ಕೋಹ್ಲಿ ಹಾಗೂ ಕೆ.ಎಲ್. ರಾಹುಲ್ ರ ಭರ್ಜರಿ ಅರ್ಧ ಶತಕಗಳ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 340 ರನ್ ಗಳಿಸಿತ್ತು. 341 ರನ್ ಗಳ ಬೃಹತ್ ಗುರಿಯನ್ನ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 49.1 ಓವರ್ ಗಳಲ್ಲಿ 304 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಭಾರತ ತಂಡ ರನ್ ಗಳ ಅಂತರದ ಜಯ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಸಮಬಲ ಸಾಧಿಸಿತು. ಕುಲದೀಪ್ ಯಾದವ್ 2 ವಿಕೆಟ್ ಪಡೆಯುವುದರೊಂದಿಗೆ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ 100 ವಿಕೆಟ್ ಗಳನ್ನ ಕಬಳಿಸಿದರು. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಗಳಿಸಿತ್ತು. ಈಗಿನ ಸಮಬಲದಿಂದಾಗಿ ಬೆಂಗಳೂರಿನಲ್ಲಿ ನಡೆಯಲಿರೋ 3ನೇ ಏಕದಿನ ಪಂದ್ಯ ಕುತೂಹಲ ಕೆರಳಿಸಿದೆ.