ಮುಂಬೈ : ಮುಂಬೈ ನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ 3 ನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 78 ರನ್ ಗಳ ಅಂತರದ ಭರ್ಜರಿ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಧವನ್ ಹಾಗೂ ರಾಹುಲ್ ರ ಭರ್ಜರಿ ಜೊತೆಯಾಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 201 ರನ್ ಗಳಿಸಿತ್ತು. ಗೆಲ್ಲಲು 202 ರನ್ ಗಳ ಗುರಿಯನ್ನ ಬೆನ್ನತ್ತಿದ ಶ್ರೀಲಂಕಾ ತಂಡ 15.5 ಓವರ್ ಗಳಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 123 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಇದರೊಂದಿಗೆ ಭಾರತ 3 ಪಂದ್ಯಗಳ ಸರಣಿಯನ್ನ 2-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.