ಆದ್ಯೋತ್ ಸುದ್ದಿ ನಿಧಿ : ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಅಧ್ಯಕ್ಷ ರೋಜರ ಬಿನ್ನಿ ಹಾಗೂ ಕಾರ್ಯದರ್ಶಿ ಸಂತೋಷ ಮೇನನ್ ಅವರು ಇಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಭೇಟಿಯಾದರು.
ಈ ವೇಳೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಾಣ ಮಾಡುವ ಕುರಿತು ಚರ್ಚೆ ನಡೆಸಿದರು. ಜಿಲ್ಲೆಯ ದಶಕಗಳ ಬೇಡಿಕೆಯಾದ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಹಾಗೂ ಎಲ್ಲಾ ಸೌಕರ್ಯಗಳನ್ನು KSCA ಗೆ ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಚಿವರು ಆಶ್ವಾಸನೆ ನೀಡಿದರು.