ಆದ್ಯೋತ್ ಸ್ಪೋರ್ಟ್ಸ್ ಡೆಸ್ಕ್ : ದೇಶದಲ್ಲಿ ನೊವೆಲ್ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 29 ರಿಂದ ಪ್ರಾರಂಭವಾಗಬೇಕಿದ್ದ ಐಪಿಎಲ್ ಅನ್ನು ಮುಂದೂಡಲಾಗಿದೆ.
ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಮಾರ್ಚ್ 29 ರಿಂದ ನಡೆಸಲಾಗುವುದು ಅಂತ ಬಿಸಿಸಿಐ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಆದರೆ ದೇಶದಲ್ಲಿ ನೊವೆಲ್ ಕೊರೊನಾ ವೈರಸ್ ಹರಡಿರೋದ್ರಿಂದ ಜನರ ಸುರಕ್ಷತಾ ದೃಷ್ಟಿಯಿಂದ ಖಾಲಿ ಸ್ಟೇಡಿಯಂ ನಲ್ಲಿ ಐಪಿಎಲ್ ನಡೆಸಬಹುದು ಅಂತ ಆಯಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರ್ಕಾರ ಸೂಚಿಸಿತ್ತು. ಆದರೆ ಈ ಬಗ್ಗೆ ಚಿಂತನೆ ನಡೆಸಿದ ಬಿಸಿಸಿಐ ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿದ್ದು, ಏಪ್ರಿಲ್ 15ರ ವರೆಗೆ ಐಪಿಎಲ್ ಹಬ್ಬವನ್ನ ಮುಂದೂಡಿದೆ ಅಂತ ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ. ಪರಿಸ್ಥಿತಿಯನ್ನ ನೋಡಿ ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.