ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆ.ಪಿ ನಡ್ಡಾ ಅಧಿಕಾರ ಸ್ವೀಕಾರ

ನವದೆಹಲಿ : ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ ನಡ್ಡಾ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಕೆಲ ತಿಂಗಳ ಹಿಂದೆ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ನಡ್ಡಾ ಆಯ್ಕೆ ಇದೀಗ ಅಧಿಕೃತವಾಗಿದೆ.

ನವದೆಹಲಿಯ ಬಿಜೆಪಿ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೆ.ಪಿ ನಡ್ಡಾ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ನಡ್ಡಾರಿಗೆ ಅಧಿಕಾರವನ್ನ ಹಸ್ತಾಂತರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ರಾಷ್ಟ್ರೀಯ ಮುಖಂಡರು ಹಾಗೂ ರಾಜ್ಯದ ಬಿಜೆಪಿ ಮುಖಂಡರು ಹಾಜರಿದ್ದರು.

About the author

Adyot

Leave a Comment