ಆದ್ಯೋತ್ ಸುದ್ದಿ ನಿಧಿ : ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಈ ಸಂದರ್ಭದಲ್ಲೇ ಸರ್ಕಾರ, ಮಂತ್ರಿ ಸ್ಥಾನಕ್ಕಾಗಿ ಕಾದಿದ್ದ ಹಲವಾರು ಶಾಸಕರಿಗೆ ಸ್ವಲ್ಪ ಸಮಾಧಾನದ ಗಿಫ್ಟ್ ನೀಡಿದೆ.
ಹೌದು.. ಮಂತ್ರಿ ಸ್ಥಾನ ಹಾಗೂ ನಿಗಮ ಮಂಡಳಿಗಳಿಗೆ ಕಾದಿದ್ದ 24 ಶಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ 24 ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಮುಖ್ಯವಾಗಿ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರಗೆ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದ್ದು, ಸಾಗರ ಶಾಸಕ ಹರತಾಳು ಹಾಲಪ್ಪಗೆ ಎಂ.ಎಸ್.ಐ.ಎಲ್ ಅಧ್ಯಕ್ಷ ಸ್ಥಾನ ದೊರಕಿದೆ. ಉಳಿದಂತೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನ ದೊರಕಿದ್ರೆ, ಹಾಸನದ ಏಕೈಕ ಬಿಜೆಪಿ ಶಾಸಕ ಪ್ರೀತಮ್ ಗೌಡಗೆ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಸ್ಥಾನ ದೊರಕಿದೆ.