ಮನೆ ಮತ್ತು ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ- ಢಾ.ಹರೀಶಕುಮಾರ

ಆದ್ಯೋತ್ ಸುದ್ದಿನಿಧಿ:
ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ:
ಉತ್ತರಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಜಿಲ್ಲೆಯ ಎಲ್ಲಾ ಎಸಿ, ತಹಶೀಲ್ದಾರ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ಕೊವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ಆದೇಶದನ್ವಯ ಮನೆ ಮತ್ತು ದೇವಸ್ಥಾನಗಳಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿರುತ್ತದೆ‌ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಹಾಗೂ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ. ಗಣೇಶ ಚತುರ್ಥಿ ಹಬ್ಬವನ್ನು ಗುಂಪಾಗಿ ಸೇರದೇ ಭಕ್ತಿಪೂರ್ವಕವಾಗಿ ಆಚರಿಸುವಂತೆ ಜನರಲ್ಲಿ ಜಾಗೃತೆ ಮೂಡಿಸಬೇಕೆಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು ಅಲ್ಲದೇ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆಗಳು ಹೊರಡಿಸಲಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಎಸಿ ಪ್ರಿಯಾಂಗಾ ಎಂ, ಉಪಸ್ಥಿತರಿದ್ದರು.

About the author

Adyot

Leave a Comment