ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಲಾವಿದರಿಗೆ ಶಾಸಕಿ ರೂಪಾಲಿ ನಾಯ್ಕ ಅಭಿನಂದನೆ

ಆದ್ಯೋತ್ ಸುದ್ದಿನಿಧಿ:
ಯಕ್ಷಗಾನ ಅಕಾಡೆಮಿ ಪ್ರಶಸ್ತಿ ವಿಜೇತರು ಕ್ಷೇತ್ರಕ್ಕೆ ಹೆಮ್ಮೆ ತಂದಿದ್ದಾರೆ
ಯಕ್ಷಗಾನ ಅಕಾಡೆಮಿಯ 2019ನೇ ಸಾಲಿನ ಪ್ರಶಸ್ತಿ ಪಡೆದ ಸಾಧಕರು ನನ್ನ ವಿಧಾನಸಭೆ ಕ್ಷೇತ್ರಕ್ಕೆ ನಾಡಿಗೆ ಹೆಮ್ಮೆ ತಂದಿದ್ದು, ಸಾಧಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಅಂಕೋಲಾ-ಕಾರವಾರ
ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ಯಕ್ಷಗಾನದ ಋಷಿ ಎಂದೆ ಕರೆಯಲ್ಪಟ್ಟ, ದಿ.ಹೊಸ್ತೋಟ ಮಂಜುನಾಥ ಭಾಗವತರ ವೀರಾಂಜನೇಯ ವೈಭವ ಕೃತಿಗೆ ಅಕಾಡೆಮಿಯ ಪುಸ್ತಕ ಬಹುಮಾನ ದೊರೆತಿದೆ. ದಿ.ಹೊಸ್ತೋಟ ಭಾಗವತರು ಅಂಕೋಲಾ ತಾಲೂಕಿನ ಮೋತಿಗುಡ್ಡದಲ್ಲಿ ವಾಸಿಸುತ್ತಿದ್ದರು. ಅವರು ಯಕ್ಷಗಾನದ ಸವ್ಯಸಾಚಿಯಾಗಿದ್ದರು.
ಅಕಾಡೆಮಿಯ ಗೌರವ ಪ್ರಶಸ್ತಿಗೆ ಪಾತ್ರರಾದ ಡಾ.ರಾಮಕೃಷ್ಣ ಗುಂದಿ ಅಂಕೋಲೆಯವರು. ವೃತ್ತಿಯಲ್ಲಿ ಉಪನ್ಯಾಸಕರು. ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದವರು. ನಿರಂತರ ಸಾಧನೆಯಿಂದ ಯಕ್ಷಗಾನದಲ್ಲಿ ತೊಡಗಿಕೊಂಡಿದ್ದರು.
ಸತತ ಅಧ್ಯಯನದಿಂದ ವಿವಿಧ ಪಾತ್ರಗಳಿಗೆ ಹೊಸ ಆಯಾಮ ನೀಡಿದವರು. ತಾಳಮದ್ದಳೆಯ ಖ್ಯಾತ ಅರ್ಥಧಾರಿಯಾದ ಎಂ.ಎನ್.ಹೆಗಡೆ ಹಳವಳ್ಳಿ ಸದ್ಯ ಯಲ್ಲಾಪುರದಲ್ಲಿ ನೆಲೆಸಿದ್ದರೂ ಮೂಲತಃ ಅಂಕೋಲಾ ತಾಲೂಕಿನ ಹಳವಳ್ಳಿಯವರು. ಈ ಸಾಧಕರು ನನ್ನ ಕ್ಷೇತ್ರಕ್ಕೆ, ಜಿಲ್ಲೆಗೆ, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ನನ್ನ ಕ್ಷೇತ್ರದ ಸಾಧಕರು ಹಾಗೂ ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.

About the author

Adyot

Leave a Comment