ಕಾರವಾರ ಬಂದ್ ಹಿನ್ನೆಲೆ, ನಗರ ಸಂಪೂರ್ಣ ಸ್ತಬ್ಧ

ಕಾರವಾರ : ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ಇಂದು ಕಾರವಾರ ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಕೇಂದ್ರಸ್ಥಾನ ಕಾರವಾರ ಸಂಪೂರ್ಣ ಸ್ತಬ್ಧವಾಗಿದೆ.

ಬೆಳಿಗ್ಗೆಯಿಂದಲೇ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಹೊಟೇಲ್, ರೆಸ್ಟೋರೆಂಟ್, ಅಂಗಡಿ-ಮುಂಗಟ್ಟುಗಳು ಬಂದ್ ಆಗಿವೆ. ಆಟೋ ಹಾಗೂ ಟೆಂಪೋ ಯೂನಿಯನ್‌ನಿಂದಲೂ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. ಕಾರವಾರದಿಂದ ಹೊರಡುವ ಬಸ್ ಸಂಚಾರಕ್ಕೆ ಬಂದ್ ಬಿಸಿ ತಟ್ಟಿದೆ. ಆದ್ರೆ ಶಾಲಾ-ಕಾಲೇಜುಗಳಿಗೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಆಸ್ಪತ್ರೆ, ಮೆಡಿಕಲ್ ಶಾಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿಲ್ಲ. ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು, ಕನ್ನಡಪರ ಸಂಘಗಳಿಂದ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿದೆ.

ಈಗಾಗಲೇ ಬಂದರು ವಿರೋಧಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೆಳಿಗ್ಗೆ 10 ಗಂಟೆ ಬಳಿಕ ಮೀನುಗಾರರು ಪ್ರತಿಭಟನೆ ನಡೆಸಲಿದ್ದಾರೆ. ಮಿತ್ರ ಸಮಾಜ ಮೈದಾನದಿಂದ ಪ್ರಾರಂಭವಾಗಲಿರುವ ಪ್ರತಿಭಟನೆ, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, 6 ಕೆ.ಎಸ್‌.ಆರ್.ಪಿ, 8 ಡಿಎಆರ್, ಡಿವೈಎಸ್ಪಿ ಸೇರಿದಂತೆ 550ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

About the author

Adyot

Leave a Comment