ಪದವೀಧರ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವ ಪ್ರಯತ್ನ ಮಾಡುತ್ತೇನೆ

ಸಿದ್ದಾಪುರ : ಹಾವೇರಿ, ಗದಗ, ಧಾರವಾಡ, ಉತ್ತರಕನ್ನಡ ಜಿಲ್ಲೆಯನ್ನೊಳಗೊಂಡ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ನಾನು ಆಯ್ಕೆಯಾದಲ್ಲಿ ನಿರುದ್ಯೋಗ ಪದವೀಧರರಿಗೆ ನಿರುದ್ಯೋಗ ಭತ್ತೆ ನೀಡುವ ಪ್ರಯತ್ನ ಮಾಡುತ್ತೇನೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಡಾ‌.ಆರ್‌.ಎಂ‌ ಕುಬೇರಪ್ಪ ಹೇಳಿದರು.


ಅವರು ಸಿದ್ದಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದಾಗಿ ಕೈಗಾರಿಕೆಗಳು ಮುಚ್ಚುತ್ತಿವೆ‌. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ 1.80 ಲಕ್ಷದಷ್ಟು ಹುದ್ದೆ ಖಾಲಿ ಇದೆ. ಅದನ್ನು ತುಂಬುವಂತೆ ಸರಕಾರದ ಮೇಲೆ ಒತ್ತಡ ಹೇರುತ್ತೇನೆ. ಕಳೆದ 40 ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವುದರಿಂದ ಶಿಕ್ಷಕರ ಸಮಸ್ಯೆ ಅರಿತಿದ್ದೇನೆ. ಶಿಕ್ಷಕರ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ನಿರಂತರ ಹೋರಾಟ ಮಾಡಿರುವುದಲ್ಲದೆ ಎಸ್.ಎಮ್.ಕೃಷ್ಣ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆ ಬಗೆಹರಿಸಿದ್ದೇನೆ ಎಂದು ಹೇಳಿದರು‌.

About the author

Adyot

1 Comment

Leave a Comment