ಆದ್ಯೋತ್ ನ್ಯೂಸ್ ಡೆಸ್ಕ್ : ಕರ್ನಾಟಕ ಸರ್ಕಾರದ ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಶಿವರಾಮ ಹೆಬ್ಬಾರ್ ಶಾಸಕರ ನಿಧಿ ಹಾಗು ಮಂತ್ರಿಗಳ ಗೌರವಧನದ ಹೊರತಾಗಿ, ತಮ್ಮ ಕುಟುಂಬದಿಂದ ಪ್ರಧಾನಮಂತ್ರಿ ಪರಿಹಾರ ನಿಧಿಗೆ 1,00,000 ರೂಪಾಯಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ 1,50,000 ರೂಪಾಯಿ ನೇರವಾಗಿ ಸಂದಾಯ ಮಾಡಿದ್ದಾರೆ.
ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 100 ರೂಪಾಯಿ ಹಾಗೂ ಪ್ರಧಾನಮಂತ್ರಿ ಪರಿಹಾರ ನಿಧಿಗೆ 100 ರೂಪಾಯಿ ನೀಡುವಂತೆ ಅಥವಾ ತಮ್ಮ ಶಕ್ತ್ಯಾನುಸಾರ ಸಹಾಯ ಮಾಡಿ ಎಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಕಾರ್ಯಕರ್ತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.