ಶಾಸಕಿ ರೂಪಾಲಿ ನಾಯ್ಕರಿಂದ ಸಚೀವ ಶ್ರೀರಾಮುಲುರಿಗೆ ಮನವಿ

ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ರೋಗಿಗಳು ಪಕ್ಕದ ಜಿಲ್ಲೆಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ ಜಿಲ್ಲಾ ಕೇಂದ್ರದಲ್ಲಿಯೇ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶ್ರೀರಾಮಲು ಅವರಿಗೆ ಶಾಸಕಿ ರೂಪಾಲಿ ಎಸ್. ನಾಯ್ಕ ಸೋಮವಾರ ಮನವಿ ಸಲ್ಲಿಸಿದರು.
ಸಚೀವರು ಕಾರವಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಚೀವರ ಹಲವು ಕಾರ್ಯಕ್ರಮಗಳಲ್ಲಿ ರೂಪಾಲಿ ನಾಯ್ಕ ಭಾಗವಹಿಸಿದ್ದರು

ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯಿಲ್ಲದೆ ಹಲವರು ಜೀವವನ್ನು ಕಳೆದುಕೊಂಡಿದ್ದಾರೆ. ಈ ಆಸ್ಪತ್ರೆ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾದರೆ ಹೃದಯದ ತೊಂದರೆ, ಅಪಘಾತಗಳಲ್ಲಿ ತೀವ್ರ ಗಾಯಗೊಂಡವರಿಗೆ ತುರ್ತು ಚಿಕಿತ್ಸೆಗೆ ಅನುಕೂಲವಾಗಲಿದೆ. ಈ ಆಸ್ಪತ್ರೆಯಲ್ಲಿ ಹೃದ್ರೋಗ ಹಾಗೂ ನರರೋಗ ವಿಭಾಗವನ್ನು ಆರಂಭಿಸಿದಲ್ಲಿ ಜಿಲ್ಲೆಯ ಜನತೆಗೆ ಅನುಕೂಲವಾಗಲಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೆಡಿಕಲ್ ಕಾಲೇಜಿಗೆ ಸುಸಜ್ಜಿತ ಆಸ್ಪತ್ರೆ ಮಂಜೂರಾಗಿತ್ತು, ಅದಕ್ಕೆ ಬೇಕಾದ ಅನುದಾನವಾಗಿ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 160 ಕೋಟಿ ರೂ. ಹಣವನ್ನು ಮಂಜೂರು ಮಾಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ

ಕೇಂದ್ರ ಪುರಸ್ಕೃತ ಯೋಜನೆಯಡಿ ಅಂಕೋಲಾ ತಾಲೂಕಾ ಆಸ್ಪತ್ರೆಯಲ್ಲಿ ಒಂದು ಡಯಾಲಿಸಸ್ ಯಂತ್ರವನ್ನು ಸ್ಥಾಪಿಸಲಾಗಿದ್ದು, ಇದರಿಂದಾಗಿ ಕೇವಲ 16 ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಬಹುದಾಗಿದೆ. ಪ್ರಸ್ತುತ ಅಂಕೋಲಾ ತಾಲ್ಲೂಕಿನಲ್ಲಿ 40 ಡಯಾಲಿಸಸ್ ರೋಗಿಗಳಿದ್ದಾರೆ. ಅದಕ್ಕಾಗಿ ಡಯಾಲಿಸಸ್ ಸೇವೆಯನ್ನು ವಿಸ್ತರಿಸುವಂತೆ ಹೆಚ್ಚುವರಿ ಯಂತ್ರಗಳನ್ನು ಸ್ಥಾಪಿಸಿ, ಚಿಕಿತ್ಸೆ ಪ್ರಮಾಣ ಹೆಚ್ಚಿಸುವಂತೆ ಮಾಡಬೇಕು.ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 60 ಪ್ರವೇಶಾರ್ಹತೆಯ ಜಿ.ಎನ್.ಎಂ. ನಸಿರ್ಂಗ್ ಸ್ಕೂಲ್‍ನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ ಪ್ರಾರಂಭಿಸಲಾಗಿದೆ. 2017 ನೇ ಸಾಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾವಣೆಗೊಂಡಿದ್ದರೂ ಇದುವರೆಗೂ ಜಿ.ಎನ್.ಎಂ. ನಸಿರ್ಂಗ್ ಸ್ಕೂಲ್ ಅಭಿವೃದ್ಧಿಗಾಗಿ ಯಾವುದೇ ಅನುದಾನ ಮಂಜೂರಾಗಿರುವುದಿಲ್ಲ. ಪ್ರಸ್ತುತ ಸ್ಕೂಲ್ ಶಿಥಿಲಾವಸ್ಥೆಯಲ್ಲಿದ್ದು, ಏ.ಎನ್.ಎಂ. ಸ್ಕೂಲ್‍ನ ಕಟ್ಟಡದಲ್ಲಿಯೇ ನಡೆಸಲಾಗುತ್ತಿದೆ. ಅದಕ್ಕಾಗಿ, ಇವುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 5 ಕೋಟಿ ರೂ. ಗಳ ಅನುದಾನ ಮಂಜೂರು ಮಾಡುವಂತೆ,ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಪ್ಯಾರಾಮೆಡಿಕಲ್ ಮತ್ತು ನಸಿರ್ಂಗ್ ಹುದ್ದೆಗಳನ್ನು ಮಂಜೂರು ಮಾಡುಬೇಕು. ಇದರಿಂದ ರೋಗಿಗಳ ಆರೈಕೆ ಮಾಡಲು ಸಹಕಾರಿಯಾಗಲಿದೆ ಎಂದು ಮನವಿಯಲ್ಲಿ ಕೋರಲಾಗಿದೆ.

About the author

Adyot

Leave a Comment