ಕರಾವಳಿಯ ಅಲೆಗಳಲ್ಲಿ ಮಿಂಚು ಬೆಳಕಿನಾಟ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಹವಾಮಾನ ಮತ್ತು ಸಮುದ್ರದ ವಾತಾವರಣದಲ್ಲಿ ಬದಲಾವಣೆಯಿಂದಾಗಿ ಸಮುದ್ರದಲ್ಲಿ ಸೃಷ್ಟಿಯ ವೈಚಿತ್ರಗಳು ನಡೆಯುತ್ತಿದೆ. ಕಾರವಾರ ಗೋವಾ ಗಡಿಯಲ್ಲಿರುವ ಮಾಜಾಳಿ ಕಡಲ ಬಳಿ ಅಲೆಗಳಲ್ಲಿ ಮಿಂಚಿನ ಬೆಳಕು ಕಾಣತೊಡಗಿದೆ.


ರಾತ್ರಿವೇಳೆ ಈ ಬೆಳಕು ಗೋಚರವಾಗುತಿದ್ದು ಮಾಜಾಳಿಯಿಂದ ಕಪ್ಪು ಮರಳಿನ ಸಮುದ್ರ ಎಂದೇ ಪ್ರಸಿದ್ಧವಾಗಿರುವ ತಿಳಮಾತಿ ಕಡಲ ತೀರದವರೆಗೂ ಆವರಿಸಿದ್ದು, ಕಳೆದ ಒಂದು ವಾರದಿಂದ ಸಮುದ್ರದಲ್ಲಿ ಈ ಬೆಳವಣಿಗೆ ಕಾರಣವಾಗುತ್ತಿದೆ. ಸಮುದ್ರದಲ್ಲಿ ಮಲಿನದಿಂದಾಗಿ ನೊಕ್ಟಿಲುಕ ಸೆಂಟಿಲನ್ಸ್ (noctiluca seintillans ) ಎಂಬ ಪಾಚಿ ಹೇರಳವಾಗಿ ಬೆಳೆದಿದ್ದು, ರಾತ್ರಿ ವೇಳೆ ಸಮುದ್ರದಲ್ಲಿ ಮಿಂಚಿನಂತೆ ಕಾಣುತಿದ್ದು ಬೆಳಕನ್ನು ಹೊರಸೂಸುತ್ತಿದೆ. ತನ್ನಲ್ಲಿ ಬೆಳಕನ್ನು ಸೂಸುವ ಶಕ್ತಿ ಹೊಂದಿರುವ ಇವು ಸಮುದ್ರಕ್ಕೆ ಸೇರುವ ತ್ಯಾಜ್ಯಗಳ ಖನಿಜಾಂಶದಿಂದ ಹೆಚ್ಚು ಬೆಳೆದಿವೆ. ಇವು ಹೆಚ್ಚಾದಾಗ ಸಮುದ್ರ ಹಸಿರಿನಂತೆ ಕಂಗೊಳಿಸುತ್ತದೆ.


ಆಹಾರ ಸಿಕ್ಕಾಗ ಹಾಗೂ ತ್ಯಾಜ್ಯ ಹೆಚ್ಚು ಸಮುದ್ರ ಸೇರುವುದರಿಂದ ಇವು ಹೆಚ್ಚು ಬೆಳೆಯುತ್ತವೆ. ತ್ಯಾಜ್ಯದ ಖನಿಜಾಂಶ ಹಾಗೂ ಸೂರ್ಯನ ಬೆಳಕು ಇವುಗಳ ಆಹಾರ‌. ಪಶ್ಚಿಮ ಕರಾವಳಿಯಲ್ಲಿ ಆಗುತ್ತಿರುವ ಹೆಚ್ಚಿನ ಮಾಲಿನ್ಯ ಇವುಗಳ ಬೆಳವಣಿಗೆಗೆ ಕಾರಣವಾಗಿದೆ. ಸದ್ಯ ಕಾರವಾರದ ಸಮುದ್ರದಲ್ಲಿ ಈ ಪಾಚಿಗಳು ಎರಡು ಮೂರು ದಿನ ಉಳಿಯಬಹುದು, ಬೇಸಿಗೆಯಲ್ಲಿ ಜಾಸ್ತಿ ಪ್ರಮಾಣದಲ್ಲಿ ಪಾಚಿ ಬೆಳೆಯುತ್ತಿದೆ. ಏಳು ದಿನ ಇವು ಬದುಕುತ್ತವೆ. ನಂತರ ಎರಡು ಪಟ್ಟಾಗಿ ಬೆಳೆಯುತ್ತದೆ. ಇವುಗಳಲ್ಲಿ ರೆಡ್, ಗ್ರೀನ್ ಟೈಡ್ ಎಂಬ ಜಾತಿಯ ಪ್ರಭೇದ ಪಾಚಿಗಳಿವೆ. ಇವುಗಳು ಟಾಕ್ಸಿನ್ ಅನ್ನು ಹೆಚ್ಚು ಉತ್ಪತ್ತಿ ಮಾಡುತ್ತವೆ. ಕೆಲವೊಮ್ಮೆ ಇವುಗಳು ಉಪಯುಕ್ತವಾದ್ರೆ ಹಲವು ಬಾರಿ ಮಾರಕವಾಗಿ ಪರಿಣಮಿಸುತ್ತವೆ ಹಾಗೂ ಪರಿಸರಕ್ಕೆ ಪೂರಕವಲ್ಲ ಎಂಬುದು ಸಂಶೋಧಕರ ಮಾತು.

About the author

Adyot

Leave a Comment