ಆದ್ಯೋತ್ ಸ್ಪೋರ್ಟ್ಸ್ ಡೆಸ್ಕ್ : ನ್ಯೂಜಿಲೆಂಡ್ ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆತಿಥೇಯ ನ್ಯೂಜಿಲೆಂಡ್ ತಂಡ ಜಯಗಳಿಸುವುದರೊಂದಿಗೆ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನ ತನ್ನ ವಶಕ್ಕೆ ಪಡೆಯಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ತಂಡ ಮಾರ್ಟಿನ್ ಗುಪ್ಟಿಲ್(79) ಹಾಗೂ ರಾಸ್ ಟೇಲರ್(73) ರನ್ ಗಳ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 273 ರನ್ ಗಳಿಸಿತು. 274 ರನ್ ಗಳ ಗುರಿಯನ್ನು ಬೆನ್ನತ್ತಿದ ಭಾರತ ತಂಡ ಶ್ರೇಯಸ್ ಅಯ್ಯರ್(52), ರವೀಂದ್ರ ಜಡೇಜಾ(52) ರನ್ ಗಳ ಹೊರತಾಗಿಯೂ 251 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲನ್ನೊಪ್ಪಿಕೊಂಡಿತು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯನ್ನ ನ್ಯೂಜಿಲೆಂಡ್ 2-0 ಮುನ್ನಡೆಯೊಂದಿಗೆ ಗೆದ್ದುಕೊಂಡಿತು.