ಶಿರಸಿ : ಅರಣ್ಯ ಇಲಾಖೆಯ ನೇಮಕಾತಿ ಸಮಯದಲ್ಲಿ ಹುದ್ದೆಗಳಿಗೆ ಅರಣ್ಯ ಶಾಸ್ತ್ರವನ್ನ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡಬೇಕು ಎಂದು ಶಿರಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎಸಿಯವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕೃಷಿ, ವಿಜ್ಞಾನ, ತೋಟಗಾರಿಕೆ, ರೇಷ್ಮೆ, ಹೈನುಗಾರಿಕೆ ಹಾಗೂ ಮೀನುಗಾರಿಕೆ ಮುಂತಾದ ಇಲಾಖೆಗಳಿಗೆ ನೇಮಕಾತಿ ಮಾಡುವಾಗ ಅದಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಪರಿಗಣಿಸಲಾಗುತ್ತಿದೆ. ಆದರೆ ಅರಣ್ಯ ಇಲಾಖೆ ನೇಮಕಾತಿಯಲ್ಲಿ ಮಾತ್ರ ತಾರತಮ್ಯ ಮಾಡಲಾಗುತ್ತಿದೆ. ಅರಣ್ಯ ಇಲಾಖೆ ಪದವೀಧರರಿಗೆ ಮೊದಲು ನೀಡಿದ್ದ 75 ಶೇಕಡಾ ಮೀಸಲಾತಿಯನ್ನು 50 ಕ್ಕೆ ಇಳಿಸಲಾಗಿದೆ. ಅರಣ್ಯ ಪದವೀಧರರೇ ಇಲಾಖೆಗೆ ನೇಮಕಾತಿಯಾದರೆ ಉತ್ಸಾಹದಿಂದ ಕೆಲಸ ನಿರ್ವಹಿಸುತ್ತಾರೆ. ಆದ್ದರಿಂದ ಮೀಸಲಾತಿ ಕಡಿತವನ್ನ ಈ ಕೂಡಲೇ ಹಿಂಪಡೆದು ಬಿ.ಎಸ್ಸಿ ಅರಣ್ಯಶಾಸ್ತ್ರ ಪದವಿಯನ್ನು ಇಲಾಖೆಯ ನೇಮಕಾತಿಗಳಿಗೆ ಪರಿಗಣಿಸಬೇಕು ಎಂದು ವಿದ್ಯಾಲಯದ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.