ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಿವರಾಮ್ ಹೆಬ್ಬಾರ್ ನೇಮಕ

ಆದ್ಯೋತ್ ನ್ಯೂಸ್ ಡೆಸ್ಕ್ : ರಾಜ್ಯದ ಮಂತ್ರಿಗಳಿಗೆ ಸೆಪ್ಟೆಂಬರ್ 16 ರಂದು ನೇಮಕ ಮಾಡಲಾಗಿದ್ದ ಜಿಲ್ಲಾ ಉಸ್ತುವಾರಿಯನ್ನು ಮಾರ್ಪಾಡು ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ರನ್ನು ನೇಮಕ ಮಾಡಲಾಗಿದೆ.


ಈ ಹಿಂದೆ ಜಿಲ್ಲೆಯ ಉಸ್ತುವಾರಿಯನ್ನು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ವಹಿಸಲಾಗಿತ್ತು. ವಿಜಯಪುರ ಜಿಲ್ಲೆಯ ಜೊತೆ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನೂ ಕೂಡ ಹೆಚ್ಚುವರಿಯಾಗಿ ನೀಡಲಾಗಿತ್ತು. ಹೊರ ಜಿಲ್ಲೆಯವರಿಗೆ ಜಿಲ್ಲೆಯ ಉಸ್ತುವಾರಿ ನೀಡಿದ್ದರಿಂದ ಉಸ್ತುವಾರಿ ಸಚಿವರು ಅಪರೂಪಕ್ಕೊಮ್ಮೆ ಬಂದು ಹೋಗುತ್ತಿದ್ದರು. ಈಗ ಜಿಲ್ಲೆಯ ಉಸ್ತುವಾರಿಯನ್ನು ಜಿಲ್ಲೆಯವರೇ ಆದ ಹೆಬ್ಬಾರ್ ರಿಗೆ ನೀಡಿರುವುದರಿಂದ ಜಿಲ್ಲೆಯ ಸಮಸ್ಯೆಗಳ ಬಗ್ಗೆ ರಾಜ್ಯ ಮಟ್ಟದಲ್ಲಿ ಮಾತನಾಡುವುದು ಸುಲಭವಾಗಲಿದೆ ಅಷ್ಟೇ ಅಲ್ಲದೇ ಆಡಳಿತದ ವೇಗವನ್ನು ಕೂಡ ಹೆಚ್ಚಿಸಲು ಇದು ಸಹಕಾರಿಯಾಗಲಿದೆ.

About the author

Adyot

Leave a Comment