ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವಸಂತ ನಾಯ್ಕ ನೇಮಕ

ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಬ್ಲಾಕ ಕಾಂಗ್ರೆಸ್ ಅಧ್ಯರನ್ನಾಗಿ
ವಸಂತ ನಾಯ್ಕ ಮನಮನೆಯವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಸೋಮವಾರ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ನೇಮಕ ಪತ್ರವನ್ನು ನೀಡಿದ್ದಾರೆ.
ಈ ಬಗ್ಗೆ ವಸಂತ ನಾಯ್ಕ ಆದ್ಯೋತ ನ್ಯೂಸ್ ಜೊತೆ ಮಾನಾಡಿದ್ದು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಿದ್ದು ಸಂತಸವನ್ನು ತಂದಿದೆ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಡುವುದರ ಮೂಲಕ ಯುವಕರನ್ನು ಪಕ್ಷಕ್ಕೆ ಕರೆತರುವ ಕೆಲಸ ಮಾಡುತ್ತೇನೆ ತಾಲೂಕಿನಲ್ಲಿ ಕಾಂಗ್ರೆಸ್ ಸಶಕ್ತವಾಗುವಂತೆ ಮಾಡುತ್ತೇನೆ ಎಂದಿದ್ದಾರೆ‌.

About the author

Adyot

Leave a Comment