ಉತ್ತರಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ,ಉತ್ಸಾಹದಿಂದ ಆಚರಿಸಲಾಯಿತು.

ಜಿಲ್ಲಾಕೇಂದ್ರ ಕಾರವಾರದಲ್ಲಿ ಉಸ್ತುವಾರಿ ಸಚೀವ ಶಿವರಾಮ ಹೆಬ್ಬಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನಡೆಸಿದರಲ್ಲದೆ.ಪಥಸಂಚಲನದಲ್ಲಿ ಭಾಗವಹಿಸಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಶಿರಸಿಯ ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನಡೆಸಿದರು.

ಶಿರಸಿಯಲ್ಲಿ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿಯವರು ಧ್ವಜಾರೋಹಣ ನಡೆಸಿ ಸಂದೇಶ ನೀಡಿದರು.

ಸಿದ್ದಾಪುರದಲ್ಲಿ ಅಬ್ಬರಿಸಿದ ಮಳೆಯ ನಡುವೆಯೂ ತಹಸೀಲ್ದಾರ ಮಂಜುಳಾ ಭಜಂತ್ರಿಯವರು ಧ್ವಜಾರೋಹಣ ನಡೆಸಿದರಲ್ಲದೆ ಕೊವಿಡ್ ವಾರಿಯರ್ಸ ಬಾಬು ಚಲುವಾ ಕೊರರ್ ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಎರಡನೇ ರೆಂಕ್ ಬಂದಿರುವ ಅನಿರುದ್ದ ಸುರೇಶ ಗುತ್ತಿಕರರನ್ನು ಸನ್ಮಾನಿಸಿದರು

ಸಿದ್ದಾಪುರದ ಸ್ಥಳೀಯ ಆಡಳಿತದ ಪರವಾಗಿ ತಹಸೀಲ್ದಾರ ಮಂಜುಳಾ ಭಜಂತ್ರಿಯವರು ಸ್ವಾತಂತ್ರ್ಯ ಹೋರಾಟಗಾರ ಬಂಗಾರ್ಯ ನಾಯ್ಕ ಮನಮನೆ(103) ಇವರ ಮನೆಗೆ ತೆರಳಿ ಸನ್ಮಾನ ಮಾಡಿದರು

ಸಿಧ್ದಾಪುರ ಪೊಲೀಸ್ ಠಾಣೆಯಲ್ಲಿ ಸಿಪಿಐ ಪ್ರಕಾಶ ನೇತೃತ್ವದಲ್ಲಿ ಧ್ವಜಾರೋಹಣ ನಡೆಸಲಾಯಿತಲ್ಲದೆ ಎಸ್.ಎಸ್.ಎಲ್.ಸಿಯಲ್ಲಿ
625/557 ಅಂಕಪಡೆದಿರುವ ಹೊಂಗಾರ್ಡ ಗಣಪತಿ ನಾಯ್ಕ ಪುತ್ರ ಜೀವನ ನಾಯ್ಕರನ್ನು ಸನ್ಮಾನಿಸಲಾಯಿತು

ಭಟ್ಕಳದಲ್ಲಿ ಶಾಸಕ ಸುನಿಲ್ ನಾಯ್ಕ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರಲ್ಲದೆ ಕೊವಿಡ್ ವಾರಿಯರ್ಸ ಆಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟರನ್ನು ಸನ್ಮಾನಿಸಿದರು.

ಸಿದ್ದಾಪುರ ಪಟ್ಟಣದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ತಾಲೂಕು ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಹಾಗೂ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಹಣಜೀಬೈಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಧ್ವಜಾರೋಹಣ ನಡೆಸಿದರು.

ಸಿದ್ದಾಪುರ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧ್ವಜಾರೋಹಣ ನಡೆಸಿದರು.ನಂತರ
ವಸಂತ ನಾಯ್ಕ ಹಾಗೂ ಜಿಪಂ ಸದಸ್ಯೆ ಸುಮಂಗಲಾ ನಾಯ್ಕ ಹಾಗೂ ಇತರರು ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ರೆಂಕ್ ಬಂದಿರುವ ಅನಿರುದ್ದ ಸುರೇಶ ಗುತ್ತಿಕರ ಮನೆಗೆ ತೆರಳಿ ಸನ್ಮಾನಿಸಿದರು.

About the author

Adyot

1 Comment

Leave a Comment