ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಹೊಸಪೇಟೆಯಲ್ಲಿ
ಮಹಿಳೆಯೊಬ್ಬಳು ತನ್ನ ಮೂರುವರ್ಷದ ಮಗುವನ್ನು ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಅಶ್ವಿನಿ ಅಶೋಕ ಕಾಮತ್(44) ಎಂಬ ಮಹಿಳೆ ಕಳೆದ ಎರಡು- ಮೂರು ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಶಿವಮೊಗ್ಗದ ಮಾನಸಿಕ ಚಿಕಿತ್ಸಾ ಕೇಂದ್ರದ ಮಾನಸಿಕ ತಜ್ಞರಿಂದ ಚಿಕಿತ್ಸೆ ಪಡೆಯುತ್ತಿದ್ದಳು ಎಂದು ತಿಳಿದು ಬಂದಿದೆ.
ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ನಾಲ್ಕು ವರ್ಷದ ಮಗಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನೂ ಮನೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.