ಶಿರಸಿಯಲ್ಲಿ ಎಸ್.ಡಿ.ಪಿ.ಐ. ಕಾರ್ಯಕರ್ತನ ಬಂಧನ

ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕೊಲೆ, ದೊಂಬಿ, ಕೊಲೆಗೆ ಯತ್ನ,ಕಳ್ಳತನ ಹೀಗೆ ಹಲವಾರು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೊರ್ವನನ್ನು ಬಂಧಿಸಲಾಗಿದೆ.
ಶಿರಸಿಯ ಕಸ್ತೂರ ಬಾ ನಗರದ ನಿವಾಸಿಯಾದ ಮಹ್ಮದ್ ಫಾರೂಕ್ ಶಫಿವುಲ್ಲಾ ಪಟೆಲ್ ಬಂಧಿತ ಆರೋಪಿಯಾಗಿದ್ದು. ಈತ ಎಸ್.ಡಿ.ಪಿ.ಐ ಹಾಗೂ ಪಿ.ಎಫ್.ಐ ಸಂಘಟನೆಗಳ ಸಕ್ರಿಯ ಕಾರ್ಯಕರ್ತನಾಗಿದ್ದ. ಇತನನ್ನು ಕರ್ನಾಟಕ ಅಕ್ರಮ ಭಟ್ಟಿ ಸಾರಾಯಿ ವ್ಯವಹಾರ, ಔಷಧಾಪರಾಧ, ಜೂಜುಕೋರ, ಗೂಂಡಾ, ಅನೈತಿಕ ವ್ಯವಹಾರಗಳ ಅಪರಾಧ ಮತ್ತು ಕೊಳಚೆ ಪ್ರದೇಶಗಳನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳುವ ಚಟುವಟಿಕೆಗಳ ಅಧಿನಿಯಮ 1985 ರನ್ವಯ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಅಪರಾಧಿ ಹಿನ್ನಲೆ:
ಆರೋಪಿಯ ವಿರುದ್ಧ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಮಹ್ಮದ್ ಫಾರೂಕ್ ಎಸ್‌.ಡಿ.ಪಿ.ಐ ಸಂಘಟನೆಯೊಂದಿಗೆ ಸೇರಿಕೊಂಡು, ಪುಂಡರ ಗುಂಪು ಕಟ್ಟಿಕೊಂಡು ಅಪರಾಧಿಕ ಕೃತ್ಯಗಳನ್ನು ಎಸಗುತ್ತಾ ಸಾಮಾನ್ಯ ಜನರಲ್ಲಿ ಭಯಭೀತಿಯನ್ನು ಸೃಷ್ಟಿಸಿ ಮತಿಯ ಕೋಮುಗಲಭೆಗಳು ಉಂಟಾಗುವಂತೆ ಪ್ರಚೋದನೆ ನೀಡುತ್ತಾ ಸಮಾಜದ ಶಾಂತಿ ಸುವ್ಯವಸ್ಥೆಗೆ ನಿರಂತರವಾಗಿ ಅಡ್ಡಿಪಡಿಸುತ್ತಿದ್ದ. ಇದರಿಂದ ಕಾನೂನು ಸುವ್ಯವಸ್ಥೆಗೆ ಕಂಟಕಪ್ರಾಯವಾಗಿದ್ದ ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಜಿಲ್ಲಾಧಿಕಾರಿ ಹರೀಶ ಕುಮಾರ್ ಆದೇಶ ಮಾಡಿದ್ದು, ಶಿರಸಿ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

About the author

Adyot

Leave a Comment