ಸಂಸದ ಅನಂತಕುಮಾರ ಹೆಗಡೆಯವರಿಗೆ ಶಸ್ತ್ರಚಿಕಿತ್ಸೆ

ಆದ್ಯೋತ್ ಸುದ್ದಿನಿಧಿ
ಕೆನರಾ ಸಂಸದ ಅನಂತಕುಮಾರ ಹೆಗಡೆಯವರಿಗೆ ಗಂಭೀರ ಶಸ್ತ್ರಕ್ರಿಯೆ ನಡೆದಿದ್ದು ವೈದ್ಯರು ದೀರ್ಘಕಾಲದ ವಿಶ್ರಾಂತಿಗೆ ಸೂಚಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಅನಂತಕುಮಾರ ಹೆಗಡೆಯವರು
ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಆದರೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಅತಿಹೆಚ್ಚು ಮತವನ್ನು ಪಡೆದು ಗೆಲುವು ಸಾಧಿಸಿದ್ದರು.
ಆದರೆ ಚುನಾವಣೆಯ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವಿರುತ್ತಿದ್ದರು.ಇತ್ತೀಚೆಗೆ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ತಜ್ಙರು ತಕ್ಷಣವೇ ಸೂಕ್ತ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದರು.

ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯಾಗಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಹಾಗೂ ವೈದ್ಯರು ದೀರ್ಘಾವಧಿಯ ವಿಶ್ರಾಂತಿಯನ್ನು ಪಡೆಯುಲು ಸೂಚಿಸಿರುವ ಹಿನ್ನೆಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವವರೆಗೆ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಅವರ ಆಪ್ತಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the author

Adyot

Leave a Comment