ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ರುದ್ರತಾಂಡವವಾಡುತ್ತಿದ್ದು ಬುಧವಾರ 849 ಪ್ರಕರಣಗಳು ದಾಖಲಾಗಿರುವುದಲ್ಲದೆ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ
ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ತಂಗಳ ಕೊವಿಡ್ ಗೆ ಬಲಿಯಾಗಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡರು ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಆಗಿದ್ದ ಸೈಯದ್ ತಂಗಳ (58) ಕಳೆದ ಕೆಲವು ದಿನಗಳಿಂದ ಕೊವಿಡ್ ಸೊಂಕಿಗೆ ಒಳಗಾಗಿದ್ದರು.ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ 7-30ಕ್ಕೆ ನಿಧನರಾಗಿದ್ದಾರೆ.