ಶಿರಸಿ : ಹಿಂದುಳಿದ ವರ್ಗಗಳಿಗೆ ಇರುವ ಮೀಸಲಾತಿಯನ್ನು ಮೂಲಭೂತ ಹಕ್ಕುಗಳಲ್ಲ ಅನ್ನುವ ಸುಪ್ರೀಂಕೋರ್ಟ್ ನ ತೀರ್ಪನ್ನು ವಿರೋಧಿಸಿ ಶಿರಸಿಯಲ್ಲಿ ಬ್ಲಾಕ್ ಕಾಂಗ್ರೆಸ್ ಘಟಕ ಎಸಿಯವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.
ಹಿಂದುಳಿದ ವರ್ಗಗಳಿಗೆ ಉದ್ಯೋಗ ಹಾಗೂ ಶಿಕ್ಷಣಗಳಲ್ಲಿ ನೀಡುವ ಮೀಸಲಾತಿಯು ಮೂಲಭೂತ ಹಕ್ಕುಗಳ ವ್ಯಾಪ್ತಿಗೆ ಒಳಪಡುತ್ತದೆ ಅನ್ನೋ ಕಾನೂನನ್ನು ಜಾರಿಗೆ ತರಲಾಗುತ್ತಿದೆಯೇ ಅಂತ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಕೇಳಿತ್ತು. ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರ ಹಿಂದಿನಂತೆಯೇ ಸಂವಿಧಾನವನ್ನ ಮುಂದುವರಿಸಲಾಗಿದೆ ಎಂದಿತ್ತು. ಇದನ್ನು ಆಧರಿಸಿ ಸುಪ್ರೀಂಕೋರ್ಟ್ ಮೀಸಲಾತಿ ಮೂಲಭೂತ ಹಕ್ಕುಗಳ ವ್ಯಾಪ್ತಿಯಲ್ಲಿ ಬರುವುದಿಲ್ಲ ಅಂತ ತೀರ್ಪು ನೀಡಿತ್ತು. ಇದನ್ನು ವಿರೋಧಿಸಿ ರಾಜ್ಯಗಳ ವಿವೇಚನೆಗೆ ಈ ವಿಷಯವನ್ನ ನೀಡಬೇಕು ಮತ್ತು ಮೀಸಲಾತಿಯು ಮೂಲಭೂತ ಹಕ್ಕೆಂದು ಪರಿಗಣಿಸಬೇಕು ಅಂತ ಶಿರಸಿ ಬ್ಲಾಕ್ ಕಾಂಗ್ರೆಸ್ ಶಿರಸಿ ಉಪವಿಭಾಗಾಧಿಕಾರಿ ಈಶ್ವರ್ ಉಳ್ಳಾಗಡ್ಡಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ.