ಟಿ20ಐ ಸರಣಿ : ಕ್ಲೀನ್ ಸ್ವೀಪ್ ಸಾಧಿಸಿದ ಟೀಮ್ ಇಂಡಿಯಾ

ಆದ್ಯೋತ್ ಸ್ಪೋರ್ಟ್ಸ್ ಡೆಸ್ಕ್ : ನ್ಯೂಜಿಲೆಂಡ್ ನ ಬೇಯ್ ಓವಲ್ ಸ್ಟೇಡಿಯಂ ನಲ್ಲಿ ನಡೆದ 5ನೇ ಹಾಗೂ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಭಾರತ ಜಯಗಳಿಸೋ ಮೂಲಕ ಸರಣಿಯನ್ನ ಕ್ಲೀನ್ ಸ್ವೀಪ್ ಮಾಡಿತು.

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ ತಂಡ ನಾಯಕ ರೋಹಿತ್ ಶರ್ಮಾ ಅವರ ಅಮೋಘ 60 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತು. 164 ರನ್ ಗಳ ಗುರಿಯೊಂದಿಗೆ ಬ್ಯಾಟಿಂಗ್ ಗೆ ಇಳಿದ ನ್ಯೂಜಿಲೆಂಡ್ ತಂಡ ರಾಸ್ ಟೇಲರ್ ಹಾಗೂ ಟಿಮ್ ಸೈಫರ್ಟ್ಸ್ ಅವರ ಅಮೋಘ ಬ್ಯಾಟಿಂಗ್ ನಡುವೆಯೂ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 156 ರನ್ ಗಳಿಸುವುದರೊಂದಿಗೆ ಸರಣಿಯ ಎಲ್ಲಾ ಪಂದ್ಯಗಳಲ್ಲೂ ಸೋಲುಂಡಿತು. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿ 5-0 ರಲ್ಲಿ ಭಾರತದ ಪಾಲಾಯಿತು.

About the author

Adyot

Leave a Comment