ನಾಳೆ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಇರಲ್ಲ

ಆದ್ಯೋತ್ ಸುದ್ದಿ ನಿಧಿ : ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ನಾಳೆ ಭಾನುವಾರದ ಲಾಕ್ ಡೌನ್ ಅನ್ನು ಕೈಬಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಹಿಂದೆ ಲಾಕ್ ಡೌನ್ 4ರಲ್ಲಿ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಶಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. 4ನೇ ಲಾಕ್ ಡೌನ್ ನಾಳೆ ಕೊನೆಗೊಳ್ಳಲಿದ್ದು, ಸಾರ್ವಜನಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ, ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಾಳೆ ಮೇ 31 ಭಾನುವಾರ ಕಂಪ್ಲೀಟ್‌ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರದಂದು ಎಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ಇರುತ್ತವೆ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the author

Adyot

1 Comment

Leave a Comment