ತ್ರಿಕೋನ ಟಿ20ಐ ಸರಣಿ : ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ ಜಯ

ಆದ್ಯೋತ್ ಸ್ಪೋರ್ಟ್ಸ್ ಡೆಸ್ಕ್ : ಇಂಗ್ಲೆಂಡ್ ನ ಮನುಕಾ ಓವಲ್ ನಲ್ಲಿ ನಡೆದ ತ್ರಿಕೋನ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡ 5 ವಿಕೆಟ್ ಗಳಿಂದ ಜಯಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಆತಿಥೇಯ ಇಂಗ್ಲೆಂಡ್ ಮಹಿಳಾ ತಂಡ ಹೆದರ್ ನೈಟ್ ಅವರ 67 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 147 ರನ್ ಗಳಿಸಿತು. 148 ರನ್ ಗಳ ಗುರಿಯೊಂದಿಗೆ ಬ್ಯಾಟಿಂಗ್ ಗೆ ಇಳಿದ ಭಾರತ ಮಹಿಳಾ ತಂಡ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ 42 ರನ್ ಗಳ ನೆರವಿನಿಂದ 19.3 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. ಇದರೊಂದಿಗೆ ಇಂಗ್ಲೆಂಡ್, ಆಸ್ಟ್ರೇಲಿಯಾ ಜೊತೆಗಿನ ತ್ರಿಕೋನ ಸರಣಿಯ ಅಂಕಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆಯಿತು.

About the author

Adyot

Leave a Comment