strong>ಆದ್ಯೋತ್ ಸ್ಪೋರ್ಟ್ಸ್ ಡೆಸ್ಕ್ : ಇಂಗ್ಲೆಂಡ್ ನ ಮನುಕಾ ಓವಲ್ ನಲ್ಲಿ ನಡೆದ ತ್ರಿಕೋನ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ಭಾರತ ಮಹಿಳಾ ತಂಡ 4 ವಿಕೆಟ್ ಗಳಿಂದ ಸೋಲುಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ ಮಹಿಳಾ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 103 ರನ್ ಗಳಿಸಿತು. ಸ್ಮೃತಿ ಮಂದಾನ 35 ಹಾಗೂ ನಾಯಕಿ ಹರ್ಮನ್ ಪ್ರೀತ್ ಕೌರ್ 28 ರನ್ ಗಳ ಕಾಣಿಕೆ ನೀಡಿದರು. 104 ರನ್ ಗಳ ಗುರಿಯೊಂದಿಗೆ ಬ್ಯಾಟಿಂಗ್ ಗೆ ಇಳಿದ ಆಸ್ಟ್ರೇಲಿಯಾ ಮಹಿಳಾ ತಂಡ 18.5 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. ಭರ್ಜರಿ ಆಲ್ರೌಂಡ್ ಪ್ರದರ್ಶನ ನೀಡಿದ ಎಲ್ಲಿಸ್ ಪೆರ್ರಿ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.