ಆದ್ಯೋತ್ ಸ್ಪೋರ್ಟ್ಸ್ ಡೆಸ್ಕ್ : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರೋ ಮಹಿಳಾ ವಿಶ್ವಕಪ್ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ವನಿತೆಯರ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಆಸ್ಟ್ರೇಲಿಯಾದ ಜಂಕ್ಷನ್ ಓವಲ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ವನಿತೆಯರ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 113 ರನ್ ಗಳಿಸಿತು. ಭಾರತದ ಪರ ರಾಧಾ ಯಾದವ್ 4 ವಿಕೆಟ್ ಪಡೆದು ಮಿಂಚಿದರು. 114 ರನ್ ಗಳ ಗುರಿಯನ್ನ ಬೆನ್ನತ್ತಿದ ಭಾರತ ಮಹಿಳಾ ತಂಡ 14.4 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಸುಲಭದ ಜಯ ದಾಖಲಿಸಿತು. ಬ್ಯಾಟಿಂಗ್ ನಲ್ಲಿ ಮತ್ತೊಮ್ಮೆ ಮಿಂಚಿದ ಶೇಫಾಲಿ ವರ್ಮಾ ತಂಡಕ್ಕೆ 47 ರನ್ ಗಳ ಕೊಡುಗೆ ನೀಡಿದರು. ಭಾರತ ಆಡಿದ 4 ಪಂದ್ಯಗಳಲ್ಲೂ ಜಯಗಳಿಸಿ ಈಗಾಗಲೇ ಸೆಮಿಫೈನಲ್ ತಲುಪಿದ್ದು, ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.