ಆದ್ಯೋತ್ ಸ್ಪೋರ್ಟ್ಸ್ ಡೆಸ್ಕ್ : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ವನಿತೆಯರ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಭಾರತದ ವಿರುದ್ಧ ಭರ್ಜರಿ ಜಯ ಸಾಧಿಸುವುದರೊಂದಿಗೆ ಸತತ 5ನೇ ಬಾರಿ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಮಹಿಳಾ ತಂಡ ನಿಗದಿತ 20 ಓವರ್ ಗಳಲ್ಲಿ4 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು. 185 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಭಾರತ ವನಿತೆಯರ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿತು. 19.1 ಓವರ್ ಗಳಲ್ಲೇ 99 ರನ್ ಗಳಿಸುವಷ್ಟರಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನ ಕಳೆದುಕೊಂಡು 85 ರನ್ ಗಳ ಹೀನಾಯ ಸೋಲನ್ನನುಭವಿಸಿತು. ಆಸ್ಟ್ರೇಲಿಯಾ ಪರ ಮೂನಿ 78 ಹಾಗೂ ಹೀಲಿ 75 ರನ್ ಗಳಿಸಿ ಮಿಂಚಿದ್ರೆ, ಮೆಗನ್ ಶಟ್ 4 ವಿಕೆಟ್ ಕಿತ್ತು ಸಂಭ್ರಮಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ ವಿಶ್ವಕಪ್ ಅನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.