ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಸಹಸ್ರಳ್ಳಿ ಗ್ರಾಮದ
ಕೊಂಕಣ ಕೊಪ್ಪದ ಆರಣ್ಯದಲ್ಲಿ ವ್ಯಕ್ತಿಯೊಬ್ಬ ಕಟ್ಟಿಗೆ ರಾಶಿ ಮಾಡಿ ಚಿತೆ ಏರ್ಪಡಿಸಿಕೊಂಡು ಬೆಂಕಿಗೆ ಧುಮುಕಿ ವಿಚಿತ್ರ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯಲ್ಲಾಪುರ ತಾಲೂಕಿನ ಸಹಸ್ರಳ್ಳಿ ಗ್ರಾಮದ ಕೊಂಕಣಕೊಪ್ಪದ
60 ವರ್ಷದ ಶಿವರಾಮ ರಾಮಕೃಷ್ಣ ಹೆಗಡೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು ಕಳೆದ ನಾಲ್ಕುವರ್ಷದಿಂದ ಬಾಯಿಕ್ಯಾನ್ಸರ್ ನಿಂದ ಬಳಲುತ್ತಿದ್ದರು ಕಳೆದ ಎರಡು ತಿಂಗಳಿನಿಂದ ಆಹಾರ ಸೇವನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ.ಮನೆಯಲ್ಲಿ ಪ್ರತ್ಯೇಕ ಕೋಣೆಯಲ್ಲಿ ವಾಸ ಮಾಡುತ್ತಿದ್ದ ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ.
ಮನೆಯಿಂದ ಒಂದು ಕಿ.ಮಿ.ದೂರದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ನನ್ನದು ಅತ್ಮಹತ್ಯೆಯಲ್ಲ ದೇವರ ಬಳಿ ಹೋಗುತ್ತಿದ್ದೇನೆ ಎಂದು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವುದಾಗಿ ತಿಳಿದು ಬಂದಿದೆ.